ಶಿವಮೊಗ್ಗ | ರೈತನಿಗೆ ಪರಿಹಾರ ಪಾವತಿಯಲ್ಲಿ ವಿಳಂಬ; ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ

Date:

ರೈತನ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬರೋಬ್ಬರಿ 33 ವರ್ಷಗಳೇ ಕಳೆದಿದ್ದರೂ, ರೈತನಿಗೆ ಪರಿಹಾರ ಪಾವತಿ ನಡೆದ ನಿರ್ಲಕ್ಷಿಸಿದ್ದ ಜಿಲ್ಲಾಧಿಕಾರಿಯ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

1992ರಲ್ಲಿ ಶಿವಮೊಗ್ಗದ ಹರಮಘಟ್ಟದ ರೈತ ನಂದಾಯಪ್ಪ ಅವರ 1 ಎಕರೆ ಭೂಮಿಯನ್ನು ವಸತಿ ಯೋಜನೆಗಾಗಿ ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು. ಭೂಸ್ವಾಧೀನಕ್ಕೆ ಪರಿಹಾರವಾಗಿ 22 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿತ್ತು. ಆದರೆ, 9 ಲಕ್ಷ ರೂ.ಗಳನ್ನು ಮಾತ್ರವೇ ನೀಡಿದ್ದ ಸರ್ಕಾರ, ಉಳಿದ ಹಣವನ್ನು ಬಾಕಿ ಉಳಿಸಿಕೊಂಡಿತ್ತು ಎಂದು ವರದಿಯಾಗಿದೆ.

ಬಾಕಿ ಪರಿಹಾರಕ್ಕಾಗಿ ರೈತ ನಂದಾಯೊಪ್ಪ ಅವರು ಜಿಲ್ಲಾಧಿಕಾರಿ ಕಚೇರಿಗೂ ಮನೆಗೂ ಅಲೆದಾಡಿ ಬಸವಳಿಸಿದ್ದರು. ಅಂತಿಮವಾಗಿ, ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಚೇರಿಗೂ ಮನೆಗೂ ಅಲೆದಾಡಲು ಮತ್ತು ನ್ಯಾಯಾಲಯದ ವ್ಯಾಜ್ಯಗಳಿಗಾಗಿ ಮತ್ತೊಂದು ಎಕರೆ ಜಮೀನನ್ನೂ ಕಳೆದುಕೊಂಡಿದ್ದೇನೆ. ತಮಗೆ ಸೂಕ್ತ ಪರಿಹಾರ ಕೊಡಿಸಬೇಕೆಂದು ಕೋರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಅರ್ಜಿಯ ವಿಚಾರಣೆ ನಡೆಸಿರುವ 2ನೇ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ರೈತನಿಗೆ 95,88,283 ರೂ. ಪರಿಹಾರ ಪಾವತಿಸುವಂತೆ ಸೂಚಿಸಿತ್ತು. ಆದರೂ, ಜಿಲ್ಲಾಧಿಕಾರಿಗಳು ರೈತನಿಗೆ ಪರಿಹಾರ ಪಾವತಿ ಮಾಡಿರಲಿಲ್ಲ.

ಈ ಲೇಖನ ಓದಿದ್ದೀರಾ?: ದ್ವೇಷ ಭಾಷಣ ನಿಷೇಧ ವಿಧೇಯಕ | ಕರ್ನಾಟಕದ ಸೌಹಾರ್ದ ಪರಂಪರೆಗೆ ರಕ್ಷಾ ಕವಚವಾಗಬಲ್ಲದೇ?

ಜಿಲ್ಲಾಧಿಕಾರಿ ನಡೆಗೆ ಅಸಮಾಧಾನಗೊಂಡಿರುವ ನ್ಯಾಯಾಲಯವು, ಜಿಲ್ಲಾಧಿಕಾರಿ ಬಳಸುತ್ತಿರುವ ಕಾರು ಜಪ್ತಿ ಮಾಡುವಂತೆ ಆದೇಶಿಸಿದೆ.

ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಅಡಿಕೆ ಬೆಳೆಗೆ ಕೊಳೆ ರೋಗ, ಎಲೆ ಚುಕ್ಕಿ ರೋಗಗಳ ನಿರ್ವಹಣೆ ಸಂಬಂಧ ಉನ್ನತ ಮಟ್ಟದ ಸಭೆ ನಡೆಯುತ್ತಿತ್ತು. ಅದೇ ಸಂದರ್ಭದಲ್ಲಿ ನ್ಯಾಯಾಲಯದ ಅಮೀನರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು. ಜಿಲ್ಲಾಧಿಕಾರಿಗಳು ಪರಿಹಾರ ವಿತರಣೆಗೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...