ಶಿವಮೊಗ್ಗ | ವಿಮಾನ ನಿಲ್ದಾಣ ವಿಸಿಬಿಲಿಟಿ ಸಮಸ್ಯೆ ಬಗೆಹರಿಸಲು ವಿಳಂಬ : ಬಿ ವೈ ರಾಘವೇಂದ್ರ ಆಕ್ರೋಶ

Date:

ಶಿವಮೊಗ್ಗ, ವಿಸಿಬಲಿಟಿ (Visibility) ಸಮಸ್ಯೆಯಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡ್‌ ಆಗಲು ಸಮಸ್ಯೆಯಾಗುತ್ತಿದೆ. ಇದನ್ನು ನೀಗಿಸಲು 15 ದಿನದ ಹಿಂದೆಯೇ ಉಪಕರಣ ತರಿಸಲಾಗಿದೆ.

ಆದರೆ ಇದನ್ನು ಅಳವಡಿಸಲು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ವಿಳಂಬ ಮಾಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ವಿಮಾನ ನಿಲ್ದಾಣದ ವಿಸಿಬಲಿಟಿ ಸಮಸ್ಯೆ ನೀಗಿಸಲು ಜೂನ್‌ ಕೊನೆಯ ವಾರದಲ್ಲಿ ಉಪಕರಣ ತರಿಸಲಾಗಿದೆ. ಇದರ ಅಳವಡಿಕೆಗೆ ಫೌಂಡೇಷನ್‌, ಆಂಟೆನಾ ನಿರ್ಮಿಸಲು ಸುಮಾರು ಒಂದು ಕೋಟಿ ರೂಪಾಯಿ ಅಗತ್ಯವಿದೆ. ಆದರೆ ಈತನಕ ಹಣವ ಬಿಡುಗಡೆಯಾಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಸಿದ್ದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿದ್ದ ವಿಶೇಷ ವಿಮಾನ ಲ್ಯಾಂಡ್‌ ಆಗಲು ಸಮಸ್ಯೆಯಾಯಿತು. ವಿಸಿಬಲಿಟಿ ಸಮಸ್ಯೆಯಿಂದಾಗಿ ಸುಮಾರು ಮೂರು ಸುತ್ತು ಹಾಕಿದ ಬಳಿಕ ವಿಮಾನ ಲ್ಯಾಂಡ್‌ ಆಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಭೇಟಿ ಹಿನ್ನೆಲೆ ಕೆಎಸ್‌ಐಐಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿದ್ದೆ. ಆಗ ಅವರು ಶೀಘ್ರ ಉಪಕರಣ ಅಳವಡಿಸುವ ಭರವಸೆ ನೀಡಿದ್ದಾರೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...