ಶಿವಮೊಗ್ಗ | ಅಂಬೇಡ್ಕರ್ ಭವನ ಉದ್ಘಾಟಿಸುವಂತೆ ಆಗ್ರಹ

Date:

ಶಿವಮೊಗ್ಗ, 2018 ರಲ್ಲಿ ಭದ್ರಾವತಿಯ ಹೃದಯ ಭಾಗವಾದ ಕನಕ ಮಂಟಪ ಮುಂಭಾಗ ಬಿ.ಇ.ಒ ಕಛೇರಿಯ ಪಕ್ಕದಲ್ಲಿ ವಿಶಾಲವಾದ ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ ಸಭೆ ಸಮಾರಂಭ ನಡೆಸಲು ವಿದ್ಯಾರ್ಥಿಗಳಿಗೆ, ಸಂಘ ಸಂಸ್ಥೆಗಳಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚು ಉಪಯೋಗವಾಗುತ್ತಿರುವ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಉದ್ಘಾಟಿಸಿ ಮಾನವ ಹಕ್ಕುಗಳ ವೇದಿಕೆ ಮತ್ತು ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, 2018 ರಲ್ಲಿ ಪ್ರಾರಂಭಿಸಿದ ಅಂಬೇಡ್ಕರ್ ಕಾಮಗಾರಿ ಹಲವು ವರ್ಷಗಳಿಂದಲೂ ಆರ್ಥಿಕ ನೆರವು ಇಲ್ಲದೆ. ಪದೇ ಪದೇ ಕಾಮಗಾರಿಯು ನಿಲ್ಲುತ್ತಿದ್ದು, ಈ ಬಗ್ಗೆ ನಿರಂತರ ಹೋರಾಟ ನಡೆಸಿಕೊಂಡುಬಂದು ಭವನ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ.

ರಾಜ್ಯದ 224 ತಾಲ್ಲೂಕಿನಲ್ಲಿಯೇ ವಿಶೇಷವಾದ ಸುಂದರ ಮತ್ತು ವಿಶಾಲವಾದ ಭವನ ಇದಾಗಿದೆ. ಭವನದ ಹಿಂಭಾಗ ಊಟದ ಕೋಣೆ, ವಿಶ್ರಾಂತಿ ಕೊಠಡಿಗಳು ಹಾಗೂ ಪಾರ್ಕಿಂಗ್ ಕಾಮಗಾರಿಯು ಮಾಡಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾಮಗಾರಿಗೆ ಸುಮಾರು 200 ಕೋಟಿಗಳನ್ನು ಮಂಜೂರು ಮಾಡಲು ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದರ ಉಸ್ತುವಾರಿಯನ್ನು ನೋಡಿಕೊಳ್ಳಲು 2018 ರಿಂದ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿಯನ್ನು ರಚಿಸಲಾಗಿದ್ದು, ಪ್ರಧಾನ ಗೌರವ ಅಧ್ಯಕ್ಷರನ್ನಾಗಿ ಹಿರಿಯ ಹೋರಾಟಗಾರ ಡಿ ಸಿ ಮಾಯಣ್ಣನವರು, ಗೌರವ ಅಧ್ಯಕ್ಷರಾಗಿ ಇಂದಿರಾ ಬಿ ಕೃಷ್ಣಪ್ಪ, ವಿಜಯಮ್ಮ ಎನ್ ಗಿರಿಯಪ್ಪ, ರೈತ ಮುಖಂಡ ಕೆ ಟಿ ಗಂಗಾಧರ ಸಮಿತಿಯಲ್ಲಿದ್ದಾರೆ ಎಂದರು.

ಈ ಮಹತ್ವ ಯೋಜನೆಯಾದ ಗ್ರಾಮ ಸಭೆಯನ್ನು 6 ತಿಂಗಳಿಗೊಮ್ಮೆ ನಡೆಸಿ ಎಲ್ಲಾ ಇಲಾಖೆಗಳ ಅಧಿಕಾರಿಗಳೂ ಗ್ರಾಮ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ಎಲ್ಲಾ ಇಲಾಖೆಗಳ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕಾಗಿದೆ. ಆದರೂ ಗ್ರಾಮದ ಯಾವುದೇ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡದೆ ಕನಿಷ್ಟ ಗ್ರಾಮ ಸಭೆಗೂ ಆಹ್ವಾನ ನೀಡದ ಗ್ರಾಮ ಸಭೆಯಲ್ಲಿ ಅನೇಕ ಯೋಜನೆಗಳನ್ನು ಗ್ರಾಮದ ಜನರ ಮುಂದೆಯೇ ಗ್ರಾಮಸ್ಥರೇ ತೀರ್ಮಾನ ಮಾಡುವ ಕಾನೂನುಗಳು ಇದ್ದರೂ ಕಾನೂನುಗಳನ್ನು ಉಲ್ಲಂಘಿಸಿ ಗ್ರಾಮ ಸಭೆಯನ್ನು ತಮ್ಮಿಷ್ಟಕ್ಕೆ ನಡೆಸಿಸುತ್ತಿದ್ದಾರೆ ಎಂದು ದೂರಿದರು.

ಅನೇಕ ಯೋಜನೆಗಳನ್ನು ವಸತಿ ಯೋಜನೆ, ಅಂಬೇಡ್ಕರ್ ನಿಗಮಗಳಂತಹ ಹಲವು ನಿಗಮಗಳು ಅಲ್ಪ ಸಂಖ್ಯಾತ ಇಲಾಖೆ, ಹಿಂದುಳಿದ ವರ್ಗಗಗಳ ಇಲಾಖೆ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕೆ ಇಲಾಖೆ, ನೂರಾರು ಇಲಾಖೆಗಳಲ್ಲಿ ಇರುವ ಸೌಲಭ್ಯವನ್ನು ಬಡ ಜನರಿಗೆ ನೀಡದೆ ಮೋಸ ಮಾಡುತ್ತಿದ್ದಾರೆ ಎಂದರು. ಡಿ.ಸಿ/ಸಿ.ಎಸ್ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ತಹಶೀಲ್ದಾರ್ ರವರು ನಿರ್ಲಕ್ಷ್ಯ ವಹಿಸಿ ಮಾನವ ಹಕ್ಕುಗಳ ಹಾಗೂ ಸಂವಿಧಾನ ಹಕ್ಕುಗಳ ಉಲ್ಲಂಘನೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...