ಶಿವಮೊಗ್ಗ | ದೇಸಿದಿನ ಸಾಂಸ್ಕೃತಿಕ ಸಂಭ್ರಮ

Date:

ಶಿವಮೊಗ್ಗ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಳಿ ಹೆಚ್ಚಿರುವ ಇಂದಿನ ದಿನಮಾನದಲ್ಲಿ ದೇಸಿ ಸಂಸ್ಕೃತಿ‌ಯನ್ನು ಅಳವಡಿಸಿಕೊಳ್ಳುವ ತುರ್ತಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಪ್ರಭಾರ ಕುಲಪತಿ ಪ್ರೊ. ಜಗನ್ನಾಥ ಕೆ. ಡಾಂಗೆ ಅಭಿಪ್ರಾಯ‌ಪಟ್ಟರು.

ಕನ್ನಡ ಭಾರತಿ ಶುಕ್ರವಾರ ಏರ್ಪಡಿಸಿದ್ದ ‘ದೇಸಿದಿನ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮವನ್ನು ಬುದ್ಧ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ನೆಲದ ಸಂಸ್ಕೃತಿ‌ಯನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ‌ಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತಾಡಿದ ಕುಲಸಚಿವ ಎ.ಎಲ್. ಮಂಜುನಾಥ್,  ಹಳ್ಳಿಯ ಸೊಗಡಿನಲ್ಲಿ ಬದುಕಿನ ಸವಿ ಇದೆ. ಹಳ್ಳಿಯ ಬದುಕನ್ನು ಗೌರವಿಸಿ, ಪ್ರೀತಿಯಿಂದ ಅಪ್ಪಿಕೊಳ್ಳಬೇಕಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಭಾರತಿ ನಿರ್ದೇಶಕ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಕಾರ್ಯಕ್ರಮ‌ದ ಅಧ್ಯಕ್ಷತೆ ವಹಿಸಿ,  ಹಗಲು ರಾತ್ರಿ ಇರುವಂತೆ ಕಷ್ಟಸುಖಗಳು ಸಹ ಬದುಕಿನ‌ಲ್ಲಿ ನಿರಂತರವಾಗಿ ಇರುತ್ತವೆ.  ಅವುಗಳನ್ನು ಎದುರಿಸುವ ಸಾಮರ್ಥ್ಯವನ್ನು ಸಾಹಿತ್ಯದ ಓದು ನೀಡಬಲ್ಲುದು. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅರ್ಥೈಸಿಕೊಂಡು ಅಳವಡಿಸಿಕೊಳ್ಳಲು ಇಂಥ ಕಾರ್ಯಕ್ರಮಗಳು ನೆರವಾಗುತ್ತವೆ ಎಂದು ತಿಳಿಸಿದರು.

ಹಿರಿಯ ಪ್ರಾಧ್ಯಾಪಕ ಪ್ರೊ. ಪ್ರಶಾಂತ ನಾಯಕ ಉಪಸ್ಥಿತರಿದ್ದರು. ವಿದ್ಯಾರ್ಥಿ‌ನಿ ರಿಯಾಷಾ  ಪ್ರಾರ್ಥನೆ ಮಾಡಿದರು. ತನುಶ್ರೀ ಸ್ವಾಗತಿಸಿದರು. ನಮಿತ ನಿರೂಪಿಸಿದರು. ವೇದಿಕೆ ಕಾರ್ಯಕ್ರಮ‌ದ ನಂತರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...