ಶಿವಮೊಗ್ಗ | 250 ಕ್ಕೂ ಹೆಚ್ಚು ಕಾರುಗಳಲ್ಲಿ ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾ : ಕೆ ಎಸ್ ಈಶ್ವರಪ್ಪ

Date:

ಶಿವಮೊಗ್ಗ, ಹಿಂದೂಗಳ ಧಾರ್ಮಿಕ ಕ್ಷೇತ್ರದ ಬಗ್ಗೆ ಹಾಗೂ ಪುಣ್ಯಕ್ಷೇತ್ರ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ ಮಾಡುತ್ತಾ, ವೀರೇಂದ್ರ ಹೆಗ್ಗಡೆ ಅವರಿಗೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದೆ. ಇದರ ವಿರುದ್ಧ ರಾಷ್ಟ್ರಭಕ್ತರ ಬಳಗದಿಂದ ಧರ್ಮಸ್ಥಳಕ್ಕೆ ಶಿವಮೊಗ್ಗದಿಂದ ಧರ್ಮರಕ್ಷಾ ಜಾಥಾ ಹಮ್ಮಿಕೊಂಡಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಅವರು ಮಂಗಳವಾರ ಸ್ವಗೃಹದಿಂದ ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾಕ್ಕೆ ಚಾಲನೆ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದರು.
ಧರ್ಮಸ್ಥಳ ದೇವಾಲಯವನ್ನು ನಾವು ಪ್ರಾಣಕೊಟ್ಟಾದರೂ ಉಳಿಸಿಕೊಳ್ಳುತ್ತೇವೆ. ಹಿಂದೂಗಳಿಗೆ ಅದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಇದರ ವಿರುದ್ಧ ಷಡ್ಯಂತ್ರ ಮಾಡಿದವರಿಗೆ
ದೇಶ-ವಿದೇಶಗಳಿಂದ ಹಣ ಹರಿದು ಬರುತ್ತಿದೆ. ಇದರ ಮೂಲ ಕಂಡು ಹಿಡಿದು ಅಪಪ್ರಚಾರ ಮಾಡುವವರಿಗೆ ತಕ್ಕಪಾಠ ಕಲಿಸಲು ಎಸ್ ಐಟಿ ತನಿಖೆ ಸಾಕಾಗುವುದಿಲ್ಲ. ಇದನ್ನು ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು.

ಸುಮಾರು 250ಕ್ಕೂ ಹೆಚ್ಚು ಕಾರುಗಳಲ್ಲಿ ಮತ್ತು,5 ಟಿಟಿ ವಾಹನಗಳಲ್ಲಿ ರಾಷ್ಟ್ರಭಕ್ತರು ಮತ್ತು ಕ್ಷೇತ್ರದ ಭಕ್ತರು ಧರ್ಮಸ್ಥಳಕ್ಕೆ ಹೊರಟಿದ್ದೇವೆ. ಧರ್ಮವನ್ನು ಉಳಿಸಲು ಕುತಂತ್ರಿಗಳ ಷಡ್ಯಂತ್ರವನ್ನು ಬಯಲು ಮಾಡಲು ವೀರೇಂದ್ರ ಹೆಗ್ಗಡೆಯವರಿಗೆ ಧೈರ್ಯ ತುಂಬಿ ನೈತಿಕ ಬೆಂಬಲ ನೀಡುವುದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...