ಶಿವಮೊಗ್ಗ | ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಡಿವೈಎಸ್‌ಪಿ

Date:

ಸಿಬ್ಬಂದಿಯೋರ್ವರಿಂದ ₹5,000 ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಎಆರ್) ಡಿವೈಎಸ್‌ಪಿಯನ್ನು ಲಂಚದ ಸಹಿತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಡಿಎಆರ್ ಡಿವೈಎಸ್‌ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದವರೆಂದು ಗುರುತಿಸಲಾಗಿದೆ. ಇವರು ತಮ್ಮ ನಿವಾಸದಲ್ಲಿ ಮಾರ್ಚ್‌ 25ರಂದು ಸಿಬ್ಬಂದಿಯೋರ್ವರಿಂದ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಡಿಎಆರ್ ಸಿಬ್ಬಂದಿ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಸಿಬ್ಬಂದಿಯು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಮಂಗಳವಾರ ತಮ್ಮ ನಿವಾಸದಲ್ಲಿ ಸಿಬ್ಬಂದಿಯಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಲಂಚದ ಹಣದ ಸಹಿತ ಡಿವೈಎಸ್‌ಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 10.43 ಕೋಟಿ ಮನರೇಗಾ ದಿನಗೂಲಿಗಳ ನೋಂದಣಿ ರದ್ದು; ಬಡವರ ಬದುಕು ಕಸಿದ ಮೋದಿ ಸರ್ಕಾರ

ಲೋಕಾಯುಕ್ತ ಎಸ್‌ಪಿ ಮಂಜುನಾಥ್ ಚೌಧರಿ ನೇತೃತ್ವದ ಪೊಲೀಸ್ ತಂಡ ಸದರಿ ಕಾರ್ಯಾಚರಣೆ ನಡೆಸಿದ್ದು, ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...