ಶಿವಮೊಗ್ಗ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಕಾರು ಹಲವು ಬಾರಿ ಪಲ್ಟಿಯಾಗಿ ಚಾಲಕ ಮೃತ ಪಟ್ಟ ಘಟನೆ ಹೊಸನಗರದಿಂದ ವರದಿಯಾಗಿದೆ. ಕಾರು ಚಲಾಯಿಸುತ್ತಿದ್ದ ಹರಿ ಭಟ್ವ( 76) ಮೃತಪಟ್ಟಿದ್ದು ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಮಡೋಡಿ ಎಂಬಲ್ಲಿ ಘಟನೆ ಸಂಭವಿಸಿದೆ.
ಮೃತರ ಪತ್ನಿ ಕಮಲಾಕ್ಷಿ, ಸುಜಾತಾ ಮತ್ತು ಲೀಲಾವತಿ ಎಂಬುವವರ ಜೊತೆಗೆ ಕಾರಿನಲ್ಲಿ ಹೊಸನಗರದ ನಿಟ್ಟೂರಿನಿಂದ ಮತ್ತಿಕೈ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ.
ನಿಟ್ಟೂರು – ನಾಗೋಡಿ ಸಮೀಪದ ಮಡೋಡಿ ಗ್ರಾಮದ ಬಳಿ ಹರಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ಖಾಸಗಿ ಬಸ್ಸಿನ ಮಧ್ಯ ಭಾಗಕ್ಕೆ ಡಿಕ್ಕಿಯಾಗಿದೆ. ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿನತ್ತ ಸಾಗಿ ಹಲವು ಬಾರಿ ಪಲ್ಟಿಯಾಗಿದೆ.
ಈ ಸಂದರ್ಭ ಹರಿ ಭಟ್ ಅವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ. ಪತ್ನಿ ಕಮಲಾಕ್ಷಿ, ಸುಜಾತಾ ಮತ್ತು ಲೀಲಾವತಿ ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.





