ಶಿವಮೊಗ್ಗ | ಹೊಸನಗರದಲ್ಲಿ ಕೊಟ್ಟಿಗೆಯ ಚಾವಣಿ ಕುಸಿದು ವೃದ್ಧೆ ಗಂಭೀರ

Date:

ಶಿವಮೊಗ್ಗ ಜಿಲ್ಲಾದ್ಯಂತ ಶುಕ್ರವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.

ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಡ ವೃದ್ದೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ನಂಜವಳ್ಳಿ ಗ್ರಾಮದ ಇಂದಿರಾ ಎಂಬ ವೃದ್ದೆಗೆ ಗಂಭೀರ ಗಾಯಗಳಾಗಿದ್ದು ಎದೆಯ ಪಕ್ಕೆಲುಬು ಮುರಿದಿದೆ ಇದರಿಂದ ಶ್ವಾಸಕೋಶದ ತೊಂದರೆಯಾಗಿ ಉಸಿರಾಟದ ಸಮಸ್ಯೆ ಉಂಟಾದ ಕಾರಣ ರಾತ್ರಿಯೇ ಮೆಗ್ಗಾನ್ ನ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಆದರೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದ ಹಿನ್ನಲೆಯಲ್ಲಿ ವೃದ್ದೆ ಇಂದಿರಾ ಗಂಭೀರ ಗಾಯಗೊಂಡಿದ್ದಾರೆ.

ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ವೃದ್ದೆಯನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ಕರೆ ತಂದಿದ್ದಾರೆ, ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಗೆ ಕಳುಹಿಸಿಕೊಡಲಾಗಿದೆ ವೃದ್ದೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಬಗ್ಗೆ ಮಾತನಾಡಿದ ವೃದ್ದೆಯ ಪತಿ ಗಣಪತಿ, ನಿನ್ನೆ ಸಂಜೆ ಸಮಯದಲ್ಲಿ ಮನೆ ಹಿಂಬಾಗದ ಕೊಟ್ಟಿಗೆಯಲ್ಲಿ ಇಂದಿರಮ್ಮ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದು ಗಾಯಗೊಂಡಿದ್ದಾರೆ ತಕ್ಷಣ ಅಕ್ಕಪಕ್ಕದ ಮನೆಯವರ ಸಹಕಾರದಿಂದ ರಸ್ತೆ ಕೆಸರು ತುಂಬಿ ಓಡಾಡಲು ಸಾಧ್ಯವಿಲ್ಲದ ಕಾರಣ ಟ್ರ್ಯಾಕ್ಟರ್ ನಲ್ಲಿ ಮುಖ್ಯ ರಸ್ತೆಯವರೆಗೆ ಕರೆತರಲಾಯಿತು.

ರಾತ್ರಿ ಆಪರೇಷನ್ ಮಾಡಿದ್ದಾರೆ ಪರಿಸ್ಥಿತಿಯ ಬಗ್ಗೆ ವೈದ್ಯರು ಏನು ಹೇಳುತ್ತಿಲ್ಲ ,ಆಸ್ಪತ್ರೆಗೆ ಯಾವ ಅಧಿಕಾರಿಗಳು ಭೇಟಿ ನೀಡಿಲ್ಲ ಹಾಗೂ ಏನಾಯ್ತು ಎಂದು ಸಹ ವಿಚಾರಿಸಿಲ್ಲ ಎಂದರು.

ನಿನ್ನೆ ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿ , ನಂತರ ವೃದ್ದೆಯನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...