ಶಿವಮೊಗ್ಗ | ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸ್ಥಾನಕ್ಕೆ ಫೈಟ್; ವಿಜಯಲಕ್ಷ್ಮೀ ಪಾಟೀಲ್‌ ಮುಂಚೂಣಿಯಲ್ಲಿ

Date:

ಶಿವಮೊಗ್ಗ ನಗರಕ್ಕೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯರೆಡ್ಡಿ ಭೇಟಿ ಕೊಟ್ಟ ನಂತರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ಯಾರು ಹೊಸ ಅಧ್ಯಕ್ಷರಾಗುತ್ತಾರೆ ಎಂಬುದು ಇದೀಗ ಹೆಚ್ಚು ಚರ್ಚೆಯಾಗುತ್ತಿದೆ.

ಹಾಲಿ ಅಧ್ಯಕ್ಷರಾಗಿರುವ ಲಂಬಾಣಿ ಸಮುದಾಯದ ಅನಿತಾ ಕುಮಾರಿಯವರ ಅಧಿಕಾರವಧಿ 6 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಹೊಸ ಮಹಿಳಾ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದ್ದೇ ತಡ ಶಿವಮೊಗ್ಗದ ಮಹಿಳಾ ಕಾಂಗ್ರೆಸ್ಸಿನಲ್ಲಿ ಲಾಬಿ ಹೆಚ್ಚಾಗಿದೆ.

ಅನಿತಾ ಕುಮಾರಿಗಿಂತ ಮೊದಲು ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ, ಸಂಘಟಕಿ ವಿಜಯಲಕ್ಷ್ಮೀ ಪಾಟೀಲ್ ಅಧ್ಯಕ್ಷರಾಗಿದ್ದರು. ಸುಮಾರು 14 ವರ್ಷಗಳಷ್ಟು ಸುದೀರ್ಘವಾಗಿ ಯಶಸ್ವಿ ಮಹಿಳಾ ಅಧ್ಯಕ್ಷೆ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001700152

ವಿಜಯಲಕ್ಷ್ಮಿ ಪಾಟೀಲ್ ಸಂಘಟನೆಯಲ್ಲಿ ನಿಪುಣರಾಗಿದ್ದು ಎಲ್ಲಾ ಕಾರ್ಯಕರ್ತರನ್ನು ಸಮಾನವಾಗಿ ನೋಡುವ ಮೂಲಕ ಸಹಕಾರ ನೀಡುವ ಜೊತೆಗೆ, ಸಂಘಟನೆ ಮಾಡುವ ಶಕ್ತಿ ಇವರಲ್ಲಿದೆ ಎಂಬುದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ. ಜಿಲ್ಲೆಯಲ್ಲಿ ಸುತ್ತಾಡಿ ಪಕ್ಷ ಸಂಘಟನೆ ಮಾಡಿದ ಸುದೀರ್ಘ ಅನುಭವ ಇವರಿಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಎರಡು ಬಾರಿ ಸದಸ್ಯೆಯಾಗಿದ್ದಾರೆ. ಜೊತೆಗೆ ಉಪ ಮೇಯರ್ ಆಗಿ ಕೆಲಸ ನಿರ್ವಹಿಸಿದ್ದಾರೆ.

1001699589

ನೆರೆ ಬಂದಾಗ ಕಡು ಬಡವರಿಗೆ ಸ್ವಂತ ಖರ್ಚಿನಲ್ಲಿ ಪರಿಹಾರ ಒದಗಿಸಿದ್ದಾರೆ. ಹೀಗೆ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿರುವ ಉದಾಹರಣೆಗಳಿವೆ. ಕಳೆದ 18 ರಿಂದ 20 ವರ್ಷದಿಂದ ಸಾಕಷ್ಟು ಅನುಭವ ಇದ್ದು ಜೊತೆಗೆ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆಯಾಗಿ, ಪ್ರಾಮಾಣಿಕ ಪಕ್ಷ ಸಂಘಟಕಿಯಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಕಾರ್ಯ ಚಟುವಟಿಕೆಗಳು, ಸಭೆಗಳು ಹಾಗೂ ಕಾರ್ಯಕ್ರಮ ಚಟುವಟಿಕೆ ಹಾಗೂ ಪ್ರತಿಭಟನೆಗಳಲ್ಲಿ ಸದಾ ಮುಂದೆ ಇರುತ್ತಾರೆ ವಿಜಯಲಕ್ಷ್ಮಿ ಪಾಟೀಲ್. ಹಾಗಾಗಿ ಪ್ರಸ್ತುತ ಶಿವಮೊಗ್ಗ ಜಿಲ್ಲೆಗೆ ಇಂತಹ ಮಹಿಳಾ ಅಧ್ಯಕ್ಷರ ಅವಶ್ಯಕತೆಯಿದೆ ಎಂಬ ಮಾತು ಪಕ್ಷದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: ಶಿವಮೊಗ್ಗ | ಬಂಗಾರ ಆಭರಣ ಕಳ್ಳತನ ; ಶಿಕಾರಿಪುರದಲ್ಲಿ ಆರೋಪಿ ಬಂಧನ

ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಹಿಳಾ ಸಾರಥಿಯಾಗಿ ಪಕ್ಷವು ನೇಮಕ ಮಾಡುವುದಾಗಿ ಕಾರ್ಯಕರ್ತ‌ರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...