ಶಿವಮೊಗ್ಗ | ತಾಳಗುಪ್ಪ – ಮೈಸೂರು “ಕುವೆಂಪು ಎಕ್ಸ್‌ಪ್ರೆಸ್” ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ : ಕೆಲಕಾಲ ಗೊಂದಲ

Date:

ಶಿವಮೊಗ್ಗ, ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ.

ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ ಈ ರೀತಿ ಬೆಂಕಿಕಾಣಿಸಿಕೊಳ್ಳುವುದು ಸಹಜ ಎನ್ನಲಾಗಿದ್ದು, ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೆ ಸಿಬ್ಬಂದಿ ಟ್ರೈನ್​ ನಿಲ್ಲಿಸಿ ಪರಿಶೀಲನೆ ನಡೆಸಿ ಬೆಂಕಿ ನಂದಿಸಿದ್ದಾರೆ. ಈ ಕಾರಣಕ್ಕೆ ಕೆಲಹೊತ್ತು ನಿಂತಿದ್ದ ಟ್ರೈನ್, ಪರಿಶೀಲನೆ ಪೂರ್ಣಗೊಂಡ ಬಳಿಕ ಮುಂದಕ್ಕೆ ಸಾಗಿದೆ.

ತರೀಕೆರೆ ರೈಲ್ವೆ ನಿಲ್ದಾಣದ ಸಮೀಪ ರೈಲಿನ ಭೋಗಿಯೊಂದರ ಕೆಳಭಾಗದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ರೈಲು ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ ಪರಿಶೀಲಿಸಿದ್ದಾರೆ. ಭೋಗಿಯ ಚಕ್ರಗಳ ಬಳಿ ಬೆಂಕಿ ಹೊತ್ತಿಕೊಂಡಿದ್ದನ್ನ ಗಮನಿಸಿದ ಸಿಬ್ಬಂದಿ ಅದನ್ನು ನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ರೈಲ್ವೆ ಇಲಾಖೆಯ ಮೂಲಗಳು ಸ್ಪಷ್ಟಪಡಿಸಿವೆ.

ರೈಲಿನ ಚಕ್ರಗಳು ಬೆಂಕಿ ಹೊತ್ತಿಕೊಳ್ಳಲು ಕಾರಣಗಳೇನು?

ಅತಿಯಾದ ಘರ್ಷಣೆಯಿಂದ ಉಂಟಾಗುವ ತಾಪಮಾನದಿಂದ ಟ್ರೈನ್​ನ ಚಕ್ರಗಳಲ್ಲಿ ಬೆಂಕಿ ಅಥವಾ ಹೊಗೆ ಕಾಣಿಸಿಕೊಳ್ಳುತ್ತದೆ. ರೈಲಿನ ಬ್ರೇಕ್‌ಗಳು ಸರಿಯಾಗಿ ಬಿಡುಗಡೆಯಾಗದೆ ಚಕ್ರಗಳಿಗೆ ಅಂಟಿಕೊಂಡಾಗ, ಘರ್ಷಣೆ ಹೆಚ್ಚಾಗಿ ಭಾರಿ ಶಾಖ ಉತ್ಪತ್ತಿಯಾಗುತ್ತದೆ. ಇದು ಚಕ್ರಗಳ ಸಮೀಪವಿರುವ ಉರಿಯುವ ಗ್ರೀಸ್​ನಂತ ವಸ್ತುಗಳಲ್ಲಿ ಬೆಂಕಿ ಮೂಡಿಸುತ್ತದೆ.
ಇದಲ್ಲದೆ ರೈಲು ಚಲಿಸುವಾಗ, ಚಕ್ರಗಳು ಹಳಿಗಳ ಮೇಲೆ ಜಾರಿದಾಗಲೂ (ಸ್ಲಿಪ್ ಆದಾಗಲೂ) ಅತಿಯಾದ ಘರ್ಷಣೆ ಮತ್ತು ಶಾಖ ಉತ್ಪತ್ತಿಯಾಗುತ್ತದೆ. ಇದು ಕೂಡ ಬೆಂಕಿಗೆ ಕಾರಣವಾಗಬಹುದು. ಯಾಂತ್ರಿಕ ದೋಷಗಳು ಸಹ ಕೆಲವೊಮ್ಮೆ ಇದಕ್ಕೆ ಕಾರಣವಾಗಬಹುದು.

ರೈಲ್ವೆ ಇಲಾಖೆಯ ಪ್ರಕಾರ, ಇದು ಸಾಮಾನ್ಯವಾಗಿ ಆಗಾಗ ಸಂಭವಿಸುವ ಘಟನೆಯಾಗಿದ್ದು, ನಿರ್ದಿಷ್ಟ ರೈಲ್ವೆ ಸ್ಟೇಷನಗಳಲ್ಲಿ ಈ ಸಂಬಂಧ ಪರಿಶೀಲನೆ ನಡೆಸಲಾಗುತ್ತದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...