ಶಿವಮೊಗ್ಗ | ಬಗರ್ ಹುಕುಂ ಸಕ್ರಮೀಕರಣ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಬಗರ್ ಹುಕುಂ ಸಕ್ರಮೀಕರಣ ಸಮಿತಿ ವತಿಯಿಂದ ಸಾಗುವಳಿ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಇಂದು ಜಿಲ್ಲಾಧಿಕಾರಿಗಳಿಗೆ ಬಗರ್ ಹುಕುಂ ಸಮಿತಿಯ ಸದಸ್ಯ ಗಿರೀಶ್ ಮನವಿ ಮಾಡಿದರು.

ಮನವಿಯ ಬಳಿಕ ಮಾತನಾಡಿದ ಅವರು, ಸುಮಾರು 30 40 ವರ್ಷಗಳಿಂದ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿರುವ ರೈತರು1990-1991, ಹಾಗೂ 1998-99 ರವರೆಗೆ ಫಾರಂ ನಂಬರ್ 50 ,53 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು ಈಗಾಗಲೇ ಬಗರಕುಂ ಸಮಿತಿ ರಚನೆಯಾಗಿದೆ ಹಾಗೂ ಉಪ ವಿಭಾಗಾಧಿಕಾರಿಗಳು ಮೇಲ್ಮನವಿಯಲೂ ಸಹ ಅನುಮತಿಯನ್ನು ಪಡೆದಿದ್ದು ಸದರಿ ಅನುಮತಿ ಪತ್ರ ಗ್ರಾಮ ಲೆಕ್ಕಾಧಿಕಾರಿಗಳ ವರದಿಗೆ ಹೋದ ನಂತರ ವರದಿ ನೀಡದೆ ಜಿಲ್ಲಾಧಿಕಾರಿ ಗಳಾದ ತಮ್ಮಮೇಲೆ ನೆಪವೊಡ್ಡಿ ನಿರಾಕರಿಸುತ್ತಿದ್ದಾರೆ ಎಂದರು.

ಸರ್ಕಾರದ ಸುತ್ತೊಲೆಯಂತೆ ಫಾರಂ-57ರಡಿಯಲ್ಲಿ ಅರ್ಜಿ ಸಲ್ಲಿಸಿದ್ದ ರೈತರಿಗೆ ಮಾತ್ರ 10 ಕಿ. ಮೀ ನಗರ ವ್ಯಾಪ್ತಿ ಇರುವುದರಿಂದ ವರದಿ ನೀಡಬಾರದೆಂದು ಸರ್ಕಾರದ ಆದೇಶವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆದೇಶವು 50,53ಅರ್ಜಿಗೆ ಅನ್ವಯಿಸುವುದಿಲ್ಲ. ಹಾಗೂ ಈ ಇಂದೇ ಸರ್ವೇ ಇಲಾಖೆಯವರು ನೀಡಿದ ವರದಿಯು ಅವೈಜ್ಞಾನಿಕವಾಗಿದ್ದು,ವರದಿಯನ್ನು ಪುನರ್ ಪರಿಶೀಲಿಸಿ ಹಾಗೂ 50, 530ಅರ್ಜಿಯನ್ನು ಪರಿಗಣಿಸಿ ರೈತರಿಗೆ ಸಾಗುವಳಿ ನೀಡುವಂತೆ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕಾಗಿ ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಹಾಸನ | ಜಿಲ್ಲೆಯಲ್ಲಿ ಹೆಚ್ಚಾದ ಹಠಾತ್ ಸಾವು: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ ಸಭೆ

ಈ ಸಂಧರ್ಭದಲ್ಲಿ ಎಸ್ ಗಿರೀಶ್ ಸದಸ್ಯರು ಬಗರ್ ಹುಕುಂ ಸಮಿತಿ ಶಿವಮೊಗ್ಗ, ಕಲಗೋಡು ರತ್ನಾಕರ್ ನಾಗೇಂದ್ರಪ್ಪ ಫಾರಂ, ಸೊಗನೆ ಕೃಷ್ಣಪ್ಪ, ಪ್ರವೀಣ್, ಮಧುಸೂದನ್, ವೇಲು ಕಲ್ಲಾಪುರ, ಮಂಜಣ್ಣ, ವೆಂಕಟೇಶ್, ಕಟೀಕೆರೆ ಹುಚ್ಚಪ್ಪ, ಮಂಜುನಾಥ್, ಸಂಜಯ್, ಮಂಜನಾಯ್ಕ್ ಕಲ್ಲಾಪುರ, ಹರೀಶ್ ನಾಯ್ಕ ನಿದಿಗೆ ಕುಮಾರ್ ಇನ್ನು ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...