ಶಿವಮೊಗ್ಗ | ಜ.21ರಂದು ‘ಗಾಂಧಿ ಭಾರತ’ ಸಮಾವೇಶ: ಸಚಿವ ಮಧು ಬಂಗಾರಪ್ಪ

Date:

ಬೆಳಗಾವಿಯಲ್ಲಿ ಕಳೆದ ಡಿಸೆಂಬರ್ 27ರಂದು ನಡೆಯಬೇಕಿದ್ದ ಐತಿಹಾಸಿಕ ʼಗಾಂಧಿ ಭಾರತ್ʼ ಕಾರ್ಯಕ್ರಮವು ಮಾಜಿ ಪ್ರಧಾನಿ ʼಮನಮೋಹನ್ ಸಿಂಗ್ʼರವರ ನಿಧನದಿಂದ ರದ್ದಾಗಿತ್ತು. ಈ ಕಾರ್ಯಕ್ರಮವನ್ನು ಇದೇ ಜನವರಿ 21ರಂದು ಅದ್ದೂರಿಯಾಗಿ ನಡೆಸಲು ರಾಜ್ಯ ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, “ಗಾಂಧಿ ಭಾರತ ಸಮಾವೇಶದಲ್ಲಿ ಜಿಲ್ಲೆಯ ಕಾಂಗ್ರೆಸ್‌ ಮುಖಂಡರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಯಾಗಲೂ ಎಲ್ಲರೂ ಭಾಗಿಯಾಗಬೇಕು” ಎಂದು ತಿಳಿಸಿದರು.

“ಫೆಬ್ರವರಿ 4ರಂದು ನಡೆಯಲಿರುವ ʼಮಾಮ್‌ಕೋಸ್ ಚುನಾವಣೆʼಯನ್ನು ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಲಾಗಿದೆ. ಇಂದಿನಿಂದಲೇ ಪಕ್ಷದ ಎಲ್ಲ ಮುಖಂಡರು ಕಾರ್ಯಕರ್ತರು ಸರಿಯಾದ ಮಾರ್ಗಸೂಚಿಯೊಂದಿಗೆ ಸಮರ್ಥ ಅಭ್ಯರ್ಥಿಗಳನ್ನು ನಿಲ್ಲಿಸಿ ಸಕ್ರಿಯವಾಗಿ ಚುನಾವಣೆಯಲ್ಲಿ ತೊಡಗಿಸಿಕೊಂಡು ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಶ್ರಮಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯವರಿಗೆ ಚುನಾವಣಾ ಸಂದರ್ಭದಲ್ಲಿ ಮಾತ್ರ ರೈತರ ಸಮಸ್ಯೆಗಳ ಬಗ್ಗೆ ಜ್ಞಾನೋದಯವಾಗುತ್ತದೆ. ಇಂದು ಸಾಗರದಲ್ಲಿ ನಡೆಯುತ್ತಿರುವ ಅಡಕೆ ಬೆಳೆಗಾರರ ಸಮಾವೇಶವೂ ಕೂಡ ಮ್ಯಾಮ್‌ಕೋಸ್ ಚುನಾವಣೆಯ ಒಂದು ಪೂರ್ವಭಾವಿ ಸಭೆ ಅಷ್ಟೆ. 2014ರಲ್ಲಿ ತೀರ್ಥಹಳ್ಳಿಯಲ್ಲಿ ಅಮಿತ್ ಶಾ ಅಡಕೆ ಸಂಶೋಧನಾ ತೆರೆಯುವುದರೊಂದಿಗೆ 500 ಕೋಟಿ ಅನುದಾನವನ್ನು ಕೊಡುತ್ತೇನೆಂದು ಭರವಸೆ ನೀಡಿ ಮಾಯವಾದರು” ಎಂದು ಲೇವಡಿ ಮಾಡಿದರು.

ಈ ಸುದ್ದಿ ಓದಿದ್ದೀರ? ಬೀದರ್‌ | ಪಶು ಮೇಳ: ಬೆರಗುಗೊಳಿಸಿದ 90 ಕೆಜಿ ತೂಕದ ಮೇಕೆ, ₹9 ಲಕ್ಷದ ಗಿರ್‌ ತಳಿ ಎತ್ತು

“ಬಿಜೆಪಿ ಅಡಕೆ ಬೆಳೆಗಾರರ ಕುರಿತು ಒಮ್ಮೆಯೂ ಕೂಡ ಚಕಾರವೆತ್ತುತ್ತಿಲ್ಲ. ಅಡಕೆಯಿಂದ ಕ್ಯಾನ್ಸರ್ ಬರುತ್ತದೆಂದು ಬಿಜೆಪಿಯ ಕೇಂದ್ರದ ಆರೋಗ್ಯ ಸಚಿವರೇ ಹೇಳಿದ್ದಾರೆ. ಮೊದಲು ಅಡಕೆಯಿಂದ ಕ್ಯಾನ್ಸರ್ ಹೇಗೆ ಬರುತ್ತದೆಂದು ಸ್ಪಷ್ಟೀಕರಣ ಕೊಡಲಿ. ವಿದೇಶಿ ಅಡಕೆಯ ಮುಕ್ತ ಆಮದಿಗೆ ಅವಕಾಶಕೊಟ್ಟ ಬಿಜೆಪಿಗರು, ನಮ್ಮ ಅಡಕೆ ಬೆಳೆಗಾರರ ಭವಿಷ್ಯದ ಮೇಲೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ” ಎಂದು ಕಿಡಿಕಾರಿದರು.

“ಶಿವಮೊಗ್ಗ ಜಿಲ್ಲೆಯ ಅಡಕೆ ಬೆಳೆಗಾರರು ಈಗಲಾದರೂ ಎಚ್ಚರಗೂಳ್ಳಬೇಕು. ಮ್ಯಾಮ್‌ಕೋಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮುಖಾಂತರ ಬದಲಾವಣೆಗೆ ಸಹಕರಿಸಬೇಕು. ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಈ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಭೋವಿ ನಿಗಮದ ಅಧ್ಯಕ್ಷ ಎನ್ ರವಿಕುಮಾರ್, ಸೂಡಾ ಅಧ್ಯಕ್ಷ ಎಚ್ ಎಸ್ ಸುಂದರೇಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ್ರು, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾಕ್ಟರ್ ಅಂಶುಮತ್, ಮಾಜಿ ಲೋಕಸಭಾ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ, ಮುಖಂಡರಾದ ಎಸ್ ಕೆ ಮರಿಯಪ್ಪ, ಇಸ್ಮಾಯಿಲ್ ಖಾನ್ ಕಲಗೋಡು ರತ್ನಾಕರ್, ಪದ್ಮನಾಭ ನಾಗರಾಜ್‌ ಗೌಡ್ರು, ಎಚ್ ಸಿ ಯೋಗೇಶ್, ಕಡತೂರು ದಿನೇಶ್, ಜಿ ಡಿ ಮಂಜುನಾಥ್ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...