ಶಿವಮೊಗ್ಗ | ವಡ್ಡಿನಕೊಪ್ಪದಲ್ಲಿ ಗಾಂಜ ಮಾರಾಟ ಮಾಡುತ್ತಿದ್ದವರ ಬಂಧನ

Date:

ಶಿವಮೊಗ್ಗ ನಗರದ ಹರಿಗೆ ಸಮೀಪದ ವಡ್ಡಿನ ಕೊಪ್ಪದ ರಂಗನಾಥ ಲೇಔಟ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇವರಿಂದ ಅಂದಾಜು 1,ಲಕ್ಷ 70,000 ರೂಪಾಯಿ ಮೌಲ್ಯದ 5 ಕೆ.ಜಿ 780 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.ಬೊಮ್ಮನಕಟ್ಟೆ ನಿವಾಸಿ ಕಾರ್ತಿಕ್ ವಿ @ ಸಾಪಾಡ್ (21), ಕಡೇಕಲ್ ಕಾಳಿಕಾ ಪರಮೇಶ್ವರಿ ದೇವಸ್ಥಾನ ರಸ್ತೆಯ ನಿವಾಸಿ ಎನ್. ರಾಜೇಶ್ @ ರಾಜು (24)ಬಂಧಿತರು.

ಸಿಇಎನ್ ಠಾಣೆಯ ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ, ಇನ್‌ಸ್ಪೆಕ್ಟರ್‌ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಎಎಸ್‌ಐ ಶೇಖರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಬಿ.ಧರ್ಮನಾಯ್ಕ ಮತ್ತು ಅವಿನಾಶ್, ಕಾನ್‌ಸ್ಟೆಬಲ್‌ಗಳಾದ ನಾರಾಯಣ ಸ್ವಾಮಿ, ಫಿರ್ದೋಷ್ ಅಹಮದ್, ಬಿ.ರವಿ, ಆಂಡ್ರಸ್ ಜೋನ್ಸ್, ಎಲ್.ಬಿ. ಪ್ರಮೋದ್, ಬಿ. ಸಂಗಮೇಶ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...