ಶಿವಮೊಗ್ಗ | ಉಚಿತ ಇ-ಪೌತಿ ಮೂಲಕ ಪಹಣಿ ಮಾಡಿಸಿಕೊಳ್ಳಿ : ತಹಸೀಲ್ದಾರ್ ರಾಜೀವ್ ವಿ.ಎಸ್.

Date:

ಶಿವಮೊಗ್ಗ, ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.

ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ.

ಶಿವಮೊಗ್ಗ ಜಿಲ್ಲೆ ಹಾಗೂ ಶಿವಮೊಗ್ಗ ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇ-ಪೌತಿ ಆಂದೋಲನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ರಾಜೀವ್ ವಿ.ಎಸ್. ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...