ಶಿವಮೊಗ್ಗ | ಗೋವ ಪೊಲೀಸರಿಂದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ವ್ಯಕ್ತಿ ಬಂಧನ

Date:

ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.

ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ ₹1,02,42,325 ರೂಪಾಯಿಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಿಕೊಂಡು ಮೋಸ ಮಾಡಲಾಗಿದೆ ಎಂಬ ದೂರಿನನ್ವಯ ಗೋವಾ ಪೊಲೀಸರು ಶಿವಮೊಗ್ಗಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಗೋವಾದಲ್ಲಿ ದೊಡ್ಡ ಸೈಬರ್ ವಂಚನೆ 20 ಮೇ 2025ರಂದು ದಾಖಲಾದ ದೂರಿನ ಆಧಾರದ ಮೇಲೆ, ಸೈಬರ್ ಕ್ರೈಂ ಪೊಲೀಸರು BNS ಮತ್ತು IT Actನ ಅಡಿಯಲ್ಲಿ ಪ್ರಕರಣ ದಾಖಲಿಸಿದರು.

ಹಣದ ಟ್ಯಾಂಜಾಕ್ಷನ್​ ಮತ್ತು ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ಪೊಲೀಸರು, ಕೃಷ್ಣಮೂರ್ತಿಯನ್ನು ಶಿವಮೊಗ್ಗದಲ್ಲಿ ಗುರುತಿಸಿ ಅವರನ್ನು ಬಂಧಿಸಿದರು. ತನಿಖೆ ತಂಡದ ನೇತೃತ್ವವನ್ನು LPSI ಯಶಿಕಾ ಸಾಂಕೋವಾಲ್ಕರ್ ವಹಿಸಿದ್ದರು, ಮತ್ತು PI ದೀಪಕ್ ಪೆಡ್ನೇಕರ್ ಹಾಗೂ SP ರಾಹುಲ್ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನಿಖೆಯಲ್ಲಿ ಆರೋಪಿಯು ತಮ್ಮ ವೈಯಕ್ತಿಕ ಖಾತೆಗೆ ₹5 ಲಕ್ಷ ಸ್ವೀಕರಿಸಿದ್ದು, ಅದನ್ನು ಇತರ ಸಹಯೋಗಿಗಳಿಗೆ ವರ್ಗಾಯಿಸಿದ್ದು ಬೆಳಕಿಗೆ ಬಂದಿದೆ. ಇದಲ್ಲದೆ, ಅವರು “ಬಪ್ಪಾ ಮೆಷಿನ್ ಪ್ರೈವೇಟ್ ಲಿಮಿಟೆಡ್” ಎಂಬ ಹೆಸರಿನಲ್ಲಿ ಕರೆಂಟ್ ಅಕೌಂಟ್​ ತೆರೆದಿದ್ದರು. ಈ ಕಂಪನಿಯು ಮೂರು ರಾಜ್ಯಗಳಲ್ಲಿ ₹6.5 ಕೋಟಿ ಮೊತ್ತದ 5 ಸೈಬರ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದೆ ಎಂದು ಪತ್ತೆಯಾಗಿದೆ.

SP ರಾಹುಲ್ ಗುಪ್ತಾ ಅವರು ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ಅತಿಯಾದ ಲಾಭದ ಭರವಸೆ ನೀಡುವ ಆನ್ಲೈನ್ ಸ್ಕೀಮ್ಗಳ ಬಗ್ಗೆ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...