ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

Date:

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ ಇರಲಿದೆ ಶಿವಮೊಗ್ಗದ ಹಿಂದೂ ಸಂಘಟನಾ ಮಹಾಮಂಡಳಿಯ ವತಿಯಿಂದ ಈ ಬಾರಿ 81ನೇ ವರ್ಷದ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ಗಣೇಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಶಿವಮೊಗ್ಗದ ಅತಿ ದೊಡ್ಡ ಗಣಪತಿ ಉತ್ಸವ ಇದಾಗಿದ್ದು, ಈ ಬಾರಿ 11 ದಿನಗಳ ಕಾಲ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇದೀಗ ಸಮಿತಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 11 ದಿನಗಳ ಕಾಲ ನಡೆಯುವ ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಗಣಪತಿಯ ಪ್ರತಿಷ್ಠಾಪನೆಯು ಆಗಸ್ಟ್ 27, 2025 ರ ಬುಧವಾರ ಬೆಳಿಗ್ಗೆ 11:30ಕ್ಕೆ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ನೆರವೇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಣೇಶೋತ್ಸವದ ಪ್ರಯುಕ್ತ ಪ್ರತಿದಿನ ಸಂಜೆ 7 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಆಗಸ್ಟ್ 28 ರಂದು ‘ಹೊಂಗಿರಣ’ ತಂಡದವರಿಂದ “ಹಗ್ಗದ ಕೊನೆ” ಹಾಸ್ಯನಾಟಕ ಪ್ರದರ್ಶನ ಇರಲಿದೆ. ಆಗಸ್ಟ್ 29 ರಂದು ಚಂದ್ರಶೇಖರ ಭಟ್ ಮತ್ತು ತಂಡದಿಂದ “ಸಪ್ತಸ್ವರ ಗಾನ” ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 30 ರಂದು ದಾವಣಗೆರೆಯ ವಿದುಷಿ ಸಂಗೀತ ರಾಘವೇಂದ್ರ ಅವರಿಂದ “ಸುಗಮ ಸಂಗೀತ” ಹಾಗೂ ಆಗಸ್ಟ್ 31 ರಂದು ಕೆಳಕುಂಜಾಲು-ನೀಲಾವರದ ಯಕ್ಷಸಮೂಹ ಯಕ್ಷ ಕಲಾ ಪ್ರತಿಷ್ಠಾನದಿಂದ “ಯಕ್ಷಗಾನ” ಪ್ರದರ್ಶನ ಏರ್ಪಡಿಸಲಾಗಿದೆ.

ಸೆಪ್ಟೆಂಬರ್ 1 ರಂದು ‘ಕಲಾರೋಹಣ’ ತಂಡದ ಹಾಸ್ಯ ನಾಟಕ “ಅದ್ರೇಶಿ ಪರದೇಶಿಯಾದ” ಮತ್ತು ಸೆಪ್ಟೆಂಬರ್ 2 ರಂದು ಶಿವಮೊಗ್ಗದ ಶ್ರೀ ಸುಮುಖ ಕಲಾ ಕೇಂದ್ರ ಮಹಿಳಾ ಯಕ್ಷಗಾನ ಮಂಡಳಿಯಿಂದ “ನರಕಾಸುರ ವಧೆ” ಯಕ್ಷಗಾನ ಪ್ರಸಂಗ ನಡೆಯಲಿದೆ. ಸೆಪ್ಟೆಂಬರ್ 3 ರಂದು ಕೋಣಂದೂರು-ತೀರ್ಥಹಳ್ಳಿಯ ಕೆ.ಜಿ. ಶಶಿಕುಮಾರ್ ಕಾರಂತ ಮತ್ತು ವೃಂದದಿಂದ “ಗಾನಾಂಜಲಿ” ಹಾಗೂ ಸೆಪ್ಟೆಂಬರ್ 4 ರಂದು ಕೇಡಲಸರ ಶ್ರೀ ಮಹಾಗಣಪತಿ ವೀರಾಂಜನೇಯ ಕಲಾ ಪ್ರತಿಷ್ಠಾನದಿಂದ “ಸುದರ್ಶನ ವಿಜಯ” ಯಕ್ಷಗಾನ ಪ್ರಸಂಗ ಇರಲಿದೆ.

ಸೆಪ್ಟೆಂಬರ್ 5 ರಂದು ವೀರ ಶಿವಮೂರ್ತಿಯವರ ಪುಣ್ಯ ಸ್ಮರಣೆ, ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ಜರುಗಲಿವೆ.

ಅಂತಿಮವಾಗಿ, ಸೆಪ್ಟೆಂಬರ್ 6, 2025 ರ ಶನಿವಾರ ಬೆಳಗ್ಗೆ 9:30ಕ್ಕೆ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯ ರಾಜಬೀದಿ ಉತ್ಸವ ಮತ್ತು ವಿಸರ್ಜನೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...