ಶಿವಮೊಗ್ಗ | ಭೀಕರ ಅಪಘಾತ ; ಸಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ

Date:

ಶಿವಮೊಗ್ಗ, ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿಗಳಾದ ಆದಿತ್ಯ (21) ಮತ್ತು ಸಂದೀಪ್‌ (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರೆ ಜಿಲ್ಲೆ ಸುರಹೊನ್ನೆ ಹಾಗೂ ಉಡುಪಿ ಜಿಲ್ಲೆಯ ಮೂಲದವರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಮ್ಸ್ ಮೆಡಿಕಲ್ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿಗಳಾಗಿದ್ದರು ಎಂದು ಪೊಲೀಸರು ಮಾಹಿತಿಯಲ್ಲಿ ತಿಳಿದುಬಂದಿದೆ.

ಅಪಘಾತದ ಹಿನ್ನೆಲೆಯಲ್ಲಿ, ಯುವಕರು ರಕ್ತದ ಮಡುವಿನಲ್ಲಿ ಬಿದ್ದಿದ್ದು, ರಸ್ತೆಯಲ್ಲೇ ತೀವ್ರ ಗಾಯಗಳಿಂದ ಕೊನೆಯುಸಿರೆಳೆದಿದ್ದಾರೆ.

ವಾಹನದಲ್ಲಿದ್ದ ಹಾಲಿನ ಪ್ಯಾಕೆಟ್​​ಗಳು ಒಡೆದು ರಸ್ತೆಯ ಮೇಲೆಲ್ಲಾ ಹರಿದಿರುವುದು ಅಪಘಾತದ ಭೀಕರತೆಯನ್ನು ತೋರಿಸುತ್ತಿತ್ತು.

ಯುವಕರು ಬೆಳಗಿನ ಜಾವ ಬೈಕ್​ಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ಹಾಸ್ಟೆಲ್​​ಗೆ ಬರುವಾಗ ಬಸ್ ನಿಲ್ದಾಣದ ಕಡೆಯಿಂದ ಹೊರಟಿದ್ದ ಹಾಲಿನ ವಾಹನ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಇದರಿಂದ ಬೈಕ್ ನಜ್ಜುಗುಜ್ಜಾಗಿದ್ದು ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾರೆ.

ಘಟನೆ ಮಾಹಿತಿ ಸಂಬಂಧ ಸ್ಥಳಕ್ಕೆ ಆಗಮಿಸಿದ ಪಶ್ಚಿಮ‌ ಸಂಚಾರ ಠಾಣೆ ಪೊಲೀಸರು ಸದ್ಯ ಹಾಲಿನ ವಾಹನದ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...