ಶಿವಮೊಗ್ಗ | ಉಗ್ರರ ದಾಳಿಗೆ ಮೃತರಾದ ಮಂಜುನಾಥ್ ಮನೆಗೆ ಎಚ್ ಆರ್ ಬಸವರಾಜಪ್ಪ ಭೇಟಿ ಸಾಂತ್ವನ

Date:

ಜಮ್ಮು & ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರರ ದಾಳಿಯಲ್ಲಿ ಮೃತರಾದಂತಹ ಶಿವಮೊಗ್ಗದ ನಿವಾಸಿ ಮಂಜುನಾಥ್ ರಾವ್ ರವರ ಮನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪನವರು ಭೇಟಿ ಕೊಟ್ಟು ಅವರ ಪತ್ನಿ, ಮಗ, ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಮಾತನಾಡಿಜಮ್ಮು & ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಖಂಡನೀಯ. ಈ ದಾಳಿಯಲ್ಲಿ 27ಜನ ಮೃತಪಟ್ಟಿದ್ದಾರೆ. ಇದರಲ್ಲಿ ಶಿವಮೊಗ್ಗದ ಮಂಜುನಾಥ್ ರಾವ್ ಕೂಡ ಮೃತಪಟ್ಟಿದ್ದಾರೆ.

ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಜಮ್ಮು & ಕಾಶ್ಮೀರ ಪ್ರವಾಸಿಗರ ಮೇಲೆ ಹೆಚ್ಚು ಅವಲಂಬಿತವಾಗಿರುವ ಪ್ರದೇಶ. ಆದರೆ ಇಂತಹ‌ ಘಟನೆಗಳಿಂದ‌ ಪ್ರವಾಸಿಗರು ಭಯ ಪಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರ ಈ ದಾಳಿಯನ್ನು ಮಾಡಿದ ಉಗ್ರರರಿಗೆ ತಕ್ಕ ಪಾಠ ಕಲಿಸಬೇಕು ಮತ್ತು ಇನ್ನೊಮ್ಮೆ ಇಂತಹ ಘಟನೆಗಳು ನಡೆಯದಂತೆ ಉಗ್ರರರನ್ನು ಸದೆ ಬಡಿಯುವ ಕೆಲಸ ಮಾಡಬೇಕು ಜಮ್ಮು & ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆಯನ್ನ ನಿಯೋಜಿಸಬೇಕೆಂದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಹದೇವಪ್ಪ, ಭದ್ರಾವತಿ ತಾ|| ಪ್ರಧಾನ ಕಾರ್ಯದರ್ಶಿ ಸಿ.ಎಸ್ ಹನುಮಂತಪ್ಪ, ಉಪಾಧ್ಯಕ್ಷರಾದ ಮಂಜಪ್ಪ ಮೊದಲಾದವರು‌‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...