ಶಿವಮೊಗ್ಗ | ಪಡಿತರ ಅಕ್ಕಿ ಅಕ್ರಮ ದಾಸ್ತಾನು ; ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ

Date:

ಶಿವಮೊಗ್ಗ, ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ, ರಿಪ್ಪನ್‌ಪೇಟೆ ಪಿಎಸೈ ರಾಜುರೆಡ್ಡಿ ಅವರ ನೇತೃತ್ವದ ತಂಡ ಸಾಗರ ರಸ್ತೆಯ ಕಾಲೇಜು ಮುಂಭಾಗದಲ್ಲಿರುವ ಮೀನಾಕ್ಷಮ್ಮ ಎಂಬುವವರ ಮನೆ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ 8 ಕ್ವಿಂಟಾಲ್ 76 ಕೆಜಿ ಅಕ್ಕಿಯನ್ನು ದಾಸ್ತಾನು ಮಾಡಿರುವುದು ಪತ್ತೆಯಾಯಿತು.

ಪ್ರಕರಣಕ್ಕೆ ಸಂಬಂದಿಸಿದಂತೆ ಕೆಂಚನಾಲ ಗ್ರಾಮದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಡಿತರ ಅಕ್ರಮ ದಾಸ್ತಾನು ಪ್ರಕರಣದ ಮಾಹಿತಿ ತಿಳಿಯುತಿದ್ದಂತೆ ತಹಶೀಲ್ದಾರ್ ರಶ್ಮಿ ಹಾಲೇಶ್ ತತಕ್ಷಣ ಹೊಸನಗರ ತಾಲ್ಲೂಕಿನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮಕ್ಕೆ ಸೂಚಿಸಿದ್ದಾರೆ.

ಆಹಾರ ನಿರೀಕ್ಷಕರಾದ ನಾಗರಾಜ್ ಮತ್ತು ಬಾಲರಾಜ್ ಸ್ಥಳಕ್ಕೆ ಧಾವಿಸಿ ಅಕ್ಕಿಯ ಪ್ರಮಾಣವನ್ನು ಪರಿಶೀಲಿಸಿ, ಪ್ರಾಥಮಿಕ ತನಿಖೆಯ ನಂತರ ಅವರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದ ಹಿಂದೆ ಸಂಘಟಿತ ಜಾಲವಿರುವ ಸಾಧ್ಯತೆಗಳು ಗೋಚರಿಸುತ್ತಿವೆ. ಅಕ್ರಮ ದಾಸ್ತಾನು ಮತ್ತು ಕಳ್ಳಸಾಗಣೆ ಮೂಲಕ ಬಡವರಿಗೆ ತಲುಪಬೇಕಾದ ಅಕ್ಕಿಯನ್ನು ಕಪ್ಪುಬಜಾರಿನಲ್ಲಿ ಮಾರಾಟ ಮಾಡುವ ಅನೇಕ ಪ್ರಕರಣಗಳು ರಾಜ್ಯದ ವಿಭಿನ್ನ ಭಾಗಗಳಲ್ಲಿ ದಾಖಲಾಗಿವೆ.

ಈ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಘಟನೆಯೂ ಒಂದು ದೊಡ್ಡ ಜಾಲದ ಭಾಗವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಾಮಚಂದ್ರ , ಉಮೇಶ್ , ಪರಮೇಶ್ , ಸಂತೋಷ್ ಹಾಗೂ ಅವಿನಾಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...