ಶಿವಮೊಗ್ಗ | ಅಂತಾರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ; ಯುವ ಪ್ರತಿಭೆ ರೋಷನ್‌ಗೆ ಜೆಡಿಎಸ್ ಆರ್ಥಿಕ ನೆರವು

Date:

ಅಂತಾರಾಷ್ಟ್ರಿಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವ ಶಿವಮೊಗ್ಗದ ಯುವ ಪ್ರತಿಭೆಯನ್ನ, ಶಿವಮೊಗ್ಗ ಜಿಲ್ಲಾ ಜೆಡಿಎಸ್ ಸನ್ಮಾನಿಸಿದೆ‌.‌ ಸ್ಪರ್ಧೆಯಲ್ಲಿ ಭಾಗಿಯಾಗುತ್ತಿರುವ ರೋಷನ್ ರವರಿಗೆ ಆರ್ಥಿಕ ನೆರವು ನೀಡಿ ಸನ್ಮಾನಿಸಿದೆ..

ಇಂಡೋನೆಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಕೆಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿದಿಸುತ್ತಿರುವ ಶಿವಮೊಗ್ಗದ ಯುವ ಪ್ರತಿಭೆ ರೋಷನ್ ರವರಿಗೆ ಇಂದು ನಗರ ಜೆಡಿಎಸ್ ವತಿಯಿಂದ ನಗರಾಧ್ಯಕ್ಷ ದೀಪಕ್ ಸಿಂಗ್ ಅದ್ಯಕ್ಷತೆಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕಡಿದಾಳು ಗೋಪಾಲ್ ರವರು ಹಾಗೂ ರಾಜ್ಯ ಜೆಡಿಎಸ್ ಉಪಾಧ್ಯಕ್ಷರು ಆದ ಕೆ ಬಿ ಪ್ರಸನ್ನ ಕುಮಾರ್ ರವರ ನೇತೃತ್ವದಲ್ಲಿ ಅಭಿನಂದಿಸಿ ಪಂದ್ಯಾವಳಿಯಲ್ಲಿ ಗೆದ್ದು ಭಾರತಕ್ಕೆ ಮತ್ತಷ್ಟು ಕೀರ್ತಿ ತರುವಂತೆ ಹಾರೈಸಿದರು.

ಇದೆ ಸಂದರ್ಭ ಜಿಲ್ಲಾ ಜೆಡಿಎಸ್ ಪ್ರದಾನ ಕಾರ್ಯದರ್ಶಿ ಸಂಗಯ್ಯ, ಜಿಲ್ಲಾ ವಕ್ತಾರ ನರಸಿಂಹ ಗಂಧದಮನೆ, ಜೆಡಿಎಸ್ ಮುಖಂಡರುಗಳಾದ ಕೃಷ್ಣ ದಯಾನಂದ್, ಲೋಹಿತ್, ಯುವ ಜೆಡಿಎಸ್ ನ ಸಂಜಯ್ ಕಶ್ಯಪ್, ಮಂಜುನಾಥ್, ಮಾಧವ್ ಮೂರ್ತಿ, ಲೋಹಿತ್, ಗೋಪಿ ಮೊದಲಿಯರ್, ವೆಂಕಟೇಶ್, ಸಿದ್ದೇಶ್ ವೀರೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...