ಶಿವಮೊಗ್ಗ | ಜಯನಗರ ಪಿಎಸ್ಐ ನವೀನ್ ರಿಂದ ಆರೋಪಿ ಕಾಲಿಗೆ ಗುಂಡೇಟು

Date:

ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸರ ಗುಂಡಿನ ಸದ್ದು, ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಬಿದ್ದಿದೆ. ಕಲ್ಕೆರೆ ಮಂಜುನಾಥ್ @ ಕಲ್ಕೆರೆ ಮಂಜ(47) ಎಂಬ ಆರೋಪಿ ಕಾಲಿಗೆ ಗುಂಡೇಟು ತಗುಲಿದೆ. ಬೆಂಗಳೂರಿನ‌ ಕಲ್ಕೆರೆ ನಿವಾಸಿಯಾದ ಆರೋಪಿ ಮಂಜುನಾಥ್ ಕಳ್ಳತನಕ್ಕಾಗಿ ಶಿವಮೊಗ್ಗ ನಗರದಲ್ಲಿ ಮೂರ್ನಾಲ್ಕು ದಿನದಿಂದ ಓಡಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಇತನ ವಿರುದ್ಧ 72 ಪ್ರಕರಣ ದಾಖಲಾಗಿವೆ ಇದರಲ್ಲಿ ಬಹುತೇಕ ಕಳ್ಳತನ ಪ್ರಕರಣಗಳಿದ್ದವು.

ನಗರದ ಗಾಂಧಿನಗರದಲ್ಲಿ ಮನೆಗಳ್ಳತನ ನಡೆದಿದ್ದ ಕುರಿತು ಏಪ್ರಿಲ್ ಅಲ್ಲಿ ನಡೆದ ಮನೆಗಳ್ಳತನದ ಬಗ್ಗೆ ನಿತಿನ್ ಎಂಬುವರು ದೂರದ ಠಾಣೆಯಲ್ಲಿ ದೂರು ನೀಡಿದ್ದರು. ಮನೆಯ ಒಳಗೆ ಇದ್ದ ಐ 20 ಕಾರ್ ನ್ನ ಹಾಗೂ ಸುಮಾರು 11,30,000 ಚಿನ್ನಾಭರಣ, ನಗದು ಹಾಗೂ ಇತರ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿದ್ದ ಪ್ರಕರಣ ದೂರು ದಾಖಲಾಗಿತ್ತು.

ಖಚಿತ ಮಾಹಿತಿ ಮೇರೆಗೆ ಜಯನಗರ ಠಾಣೆಯ ಪೊಲೀಸರು ಬಂಧನ ಮಾಡಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಮುಂದಾಗಿದ್ದು. ಪೊಲೀಸ್ ಸಿಬ್ಬಂದಿ ದ್ಯಾಮಪ್ಪನ ಮೇಲೆ ಕಲ್ಕೆರೆ ಮಂಜ ಹಲ್ಲೆ ಮಾಡಿದ್ದನು. ಪಿಎಸ್ಐ ನವೀನ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿ, ಎಚ್ಚರಿಕೆ ನೀಡಿದ್ರೂ ಚಾಕುವಿನಿಂದ ಹಲ್ಲೆ ನಡೆಸಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಆತ್ಮರಕ್ಷಣೆಗೆ ನವೀನ್ ಕುಮಾರ್ ಆರೋಪಿ ಮಂಜನ ಕಾಲಿಗೆ ಫೈಯರ್ ಮಾಡಲಾಗಿದೆ. ಜಯನಗರ ಠಾಣೆ ಪಿಎಸ್ಐ ನವೀನ್ ಬ್ಯಾಕೋಡು ಫೈರಿಂಗ್ ಮಾಡಿದ್ದಾರೆ. ಬಳಿಕ ಆರೋಪಿ ಬಂಧನವಾಗಿದೆ.ಗಾಯಗೊಂಡ ಪೊಲೀಸ್ ಸಿಬ್ಬಂದಿ ಸಹ ಆಸ್ಪತ್ರೆಗೆ ದಾಖಲು. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...