ಶಿವಮೊಗ್ಗ | ಜೆಡಿಎಸ್ ವತಿಯಿಂದ, ಶಿಕ್ಷಕರಿಗೆ ಸನ್ಮಾನ

Date:

ಶಿವಮೊಗ್ಗ ಶಿಕ್ಷಕರ ದಿನಾಚರಣೆಯ ಅಂಗವಾಗಿ, ನಗರದ ವಿನೋಬನಗರ ವಾರ್ಡ್ ಸಂಖ್ಯೆ 18ರಲ್ಲಿ ಜನತಾದಳ (ಸೆಕ್ಯುಲರ್) ವತಿಯಿಂದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

1002185038

ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಮಾಜಿ ಶಾಸಕರೂ ಆದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನ ಕುಮಾರ್ ವಾರ್ಡ್ ಅಧ್ಯಕ್ಷ ಚಂದ್ರಶೇಖರ್ ಹಾಗೂ ವಾರ್ಡ್ ಸಮಿತಿ ಸದಸ್ಯರು ಸಹ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಾರ್ಡ್ ಸಂಖ್ಯೆ 18ರಲ್ಲಿ ಬಹಳ ವರ್ಷಗಳಿಂದ ವಾಸಿಸುತ್ತಿರುವ, ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಲವಾರು ಶಿಕ್ಷಕರ ಮನೆಗಳಿಗೆ ತೆರಳಿ ಜೆಡಿಎಸ್ ಸದಸ್ಯರು ಅವರನ್ನು ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002185032

ಸನ್ಮಾನಿತ ಶಿಕ್ಷಕರಲ್ಲಿ ಶ್ರೀಮತಿ ನೀತು ಎಸ್, ಶ್ರೀಮತಿ ಅರ್ಚನಾ ಪ್ರಕಾಶ್ ಭಟ್, ಶ್ರೀ ಓಂಕಾರ್ ನಾಯಕ್, ಶ್ರೀಮತಿ ಶೈಲಜ ನಾಯಕ್, ಶ್ರೀ ರಾಮಚಂದ್ರಪ್ಪ, ಶ್ರೀಮತಿ ಮಂಜುಳಮ್ಮ, ಶ್ರೀಮತಿ ಸವಿತಾ, ಶ್ರೀಮತಿ ಲಕ್ಷ್ಮಿ, ಶ್ರೀ ಚಂದ್ರಶೇಖರ್, ಶ್ರೀಮತಿ ಮಮತ ಚಂದ್ರಶೇಖರ್, ಶ್ರೀ ರವಿ ಕುಮಾರ್, ಮತ್ತು ಶ್ರೀ ಪ್ರಕಾಶ್ ಅವರು ಸೇರಿದ್ದಾರೆ.

ಈ ಕಾರ್ಯಕ್ರಮವು ಶಿಕ್ಷಕರ ಕೊಡುಗೆಯನ್ನು ಗೌರವಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು. ಶಿಕ್ಷಕರ ಸೇವೆಯನ್ನು ಗುರುತಿಸಿ, ಸಮಾಜದಲ್ಲಿ ಶಿಕ್ಷಣದ ಮಹತ್ವವನ್ನು ಎತ್ತಿ ಹಿಡಿಯುವ ಈ ಕಾರ್ಯಕ್ರಮವು ಪ್ರಜ್ಞಾವಂತ ಜನತೆಯ ಮೆಚ್ಚುಗೆಗೆ ಪಾತ್ರವಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ತ್ಯಾಗರಾಜ್, ಸಂಗಯ್ಯ, ದಯಾನಂದ್ ಸಾಲಗಿ, ಶಂಕರ್, ಸುರೇಶ್, ಗೋಪಿ ಮೊದಲಿಯರ್, ವೆಂಕಟೇಶ್, ದೀಕ್ಷಿತ್, ಶರತ್, ಸಿದ್ದೇಶ್, ಹಾಗೂ ಮಹಿಳಾ ಮುಖಂಡರಾದ ಶ್ರೀಮತಿ ಆಶಾ, ಜ್ಯೋತಿ,ರಾಧಾ, ವಾಣಿ, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...