ಶಿವಮೊಗ್ಗ | ಜೂನ್ ೨೧-೨೨ರ ನಾಳೆ, ನಾಡಿದ್ದು ಸಂವಿಧಾನ ಓದು ಶಿಬಿರ

Date:

ಸಂವಿಧಾನ ಓದು ಅಭಿಯಾನ ಕರ್ನಾಟಕ, ಶಿವಮೊಗ್ಗ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರವು ಜೂನ್ ೨೧-೨೨ರ ವರೆಗೆ ಎರಡು ದಿನಗಳ ಕಾಲ ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ಸನ್ನಿಧಿ ಸೆಂಟರ್‌ನಲ್ಲಿ ನಡೆಯಲಿದೆ. ಅಧ್ಯಯನ ಶಿಬಿರವನ್ನು ಜೂ.೨೧ ರಂದು ಬೆಳಿಗ್ಗೆ ೧೦ ಕ್ಕೆ ಕ್ಕೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್‌ರವರು ಉದ್ಘಾಟನೆ ಮಾಡಲಿದ್ದಾರೆ.

ಸಚಿವ ಮಧುಬಂಗಾರಪ್ಪ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಮಲ್ಲಿಗೇನಹಳ್ಳಿಯ ಸನ್ನಿಧಿ ಪಾಲನಾ ಕೇಂದ್ರದ ನಿರ್ದೇಶಕ ಫಾ. ಕ್ಲಿಫರ್ಡ್ ರೋಷನ್ ಪಿಂಟೋ, ಹಿರಿಯ ವಕೀಲ ಜಿ.ಎಸ್. ನಾಗರಾಜ್, ವಕೀಲ ವಿಜಯ್, ರಂಗಕರ್ಮಿ ಆರ್.ಎಸ್. ಹಾಲಸ್ವಾಮಿ ಮತ್ತಿತರರು ಉಪಸ್ಥಿತರಿರುವರು.ಜೂ.೨೧ರಂದು ನಡೆಯುವ ವಿವಿಧ ಗೋಷ್ಠಿಗಳಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್, ಬಿ. ರಾಜಶೇಖರಮೂರ್ತಿ. ಆರ್. ರಾಮಕೃಷ್ಣ ಉಪನ್ಯಾಸ ನೀಡುವರು.

1001780737

ಜೂ.೨೨ರಂದು ಎರಡು ಗೋಷ್ಠಿಗಳಿದ್ದು, ಸಂವಿಧಾನ ಮತ್ತು ಮಹಿಳೆ ಕುರಿತು ಶಾಂತಿ ನಾಗಲಪುರ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕುರಿತು ಕಿಗ್ಗ ರಾಜಶೇಖರ್ ಮಾತನಾಡುವರು ಎಂದರು.ಮಧ್ಯಾಹ್ನ ೧ಕ್ಕೆ ಸಮಾರೋಪ ಹಾಗೂ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ರೈತ ಮುಖಂಡ ಹೆಚ್.ಆರ್. ಬಸವರಾಜಪ್ಪ, ದ.ಸಂ.ಸ ಮುಖಂಡ ಎಂ. ಗುರುಮೂರ್ತಿ, ವಕೀಲ ಅನಂತನಾಯಕ್, ಜನಶಕ್ತಿ ಸಂಘಟನೆಯ ಕೆ.ಎಲ್. ಅಶೋಕ್, ಅನಂತರಾಮು ಮತ್ತಿತರರು ಭಾಗವಹಿಸುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...