ಶಿವಮೊಗ್ಗ | ಧರ್ಮಾದಾಯ ದತ್ತಿ ತಿದ್ದುಪಡಿ ಮಸೂದೆಗೆ ಸಹಿ ಹಾಕದ ರಾಜ್ಯಪಾಲರ ವಿರುದ್ಧ ಗರಂ ಆದ ಕಲ್ಲೂರು‌ ಮೇಘರಾಜ್

Date:

ಶಿವಮೊಗ್ಗ, ರಾಜ್ಯ ಸರ್ಕಾರ ತಂದಿರುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2024 ರಲ್ಲಿ ಉದ್ದೇಶಿಸಿದಂತೆ ‘ಎ’ ವರ್ಗದ ದೇವಸ್ಥಾನಗಳಿಂತತ್ವದ ಸಂಗ್ರಹವಾಗುವ ನಿಧಿಯಲ್ಲಿ ಶೇ.10% ಭಾಗ ಪ್ರತ್ಯೇಕಿಸಿ, ರಾಜ್ಯದಲ್ಲಿ ದುಸ್ಥಿತಿಯಲ್ಲಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ನೀಡಿ ಆ ದೇವಸ್ಥಾನಗಳ ಮತ್ತು ಅರ್ಚಕರ ಅಭಿವೃದ್ಧಿಗೆ ವಿನಿಯೋಗಿಸುವ ಸದುದ್ದೇಶದ ವಿಧೇಯಕಕ್ಕೆ ಕರ್ನಾಟಕ ರಾಜ್ಯದ ರಾಜ್ಯಪಾಲರು ಸಹಿ ಮಾಡದೇ ರಾಜ್ಯ ಸರ್ಕಾರಕ್ಕೆ ವಾಪಾಸ್‌ ಕಳುಹಿಸಿರುವುದು ಖಂಡನೀಯ ಎಂದು ಶಾಂತವೇರಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಟ್ರಸ್ಟನ‌ ಮುಖ್ಯಸ್ಥ ಕಲ್ಲೂರು‌ ಮೇಘರಾಜ, ಪ್ರತಿ ವಿಷಯದಲ್ಲಿಯೂ ರಾಜ್ಯಪಾಲರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಆರೋಪಿಸಿದರು.

ರಾಜ್ಯದಲ್ಲಿ ಮುಜರಾಯಿ ಇಲಾಖೆಯಲ್ಲಿ ‘ಎ’ ವರ್ಗದ 205, ‘ಚ’ ವರ್ಗದ 195 ಮತ್ತು ‘ಸಿ’ ವರ್ಗದ 34,217 ದೇವಾಲಯಗಳವೆ ಎಂದು ಇಲಾಖೆಯ ಅಂಕಿ ಅಂಶಗಳು ಹೇಳುತ್ತವೆ. `ಸಿ’ ವರ್ಗದ 34.217 ದೇವಸ್ಥಾನಗಳ ಪೈಕಿ 1,150 ‘ಸಿ’ ವರ್ಗದ ದೇವಸ್ಥಾನಗಳು ಬೆಂಗಳೂರು ನಗರದಲ್ಲಿವೆ. ‘ಸಿ ವರ್ಗದ ಬಹುತೇಕ ದೇವಾಲಯಗಳು ಗ್ರಾಮೀಣ ಪ್ರದೇಶಗಳಲ್ಲವೆ. ನಗರ ಪ್ರದೇಶಗಳ ದೇವಸ್ಥಾನಗಳಿಗೆ ನಿತ್ಯವೂ ಭಕ್ತರು ಭೇಟಿ ನೀಡುತ್ತಾರೆ ಮತ್ತು ಭಕ್ತರಿಂದ ಕಾಣಿಕೆ ಹಣ ಸಂಗ್ರಹವಾಗುತ್ತೆ. ಆದರೆ ಗ್ರಾಮೀಣ ಭಾಗದ ದೇವಾಲಯಗಳ ಸ್ಥಿತಿ ಬೇರೆಯೇ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಊರಹಬ್ಬ, ಜಾತ್ರೆ ಮತ್ತು ಕೆಲವು ವಿಶೇಷ ದಿನಗಳನ್ನು ಹೊರತುಪಡಿಸಿ ಗ್ರಾಮೀಣ ದೇವಾಲಯಕ್ಕೆ ಹೋಗುವವರ ಭಕ್ತಾಧಿಗಳ ಸಂಖ್ಯೆ ಅತೀ ವಿರಳ. ಹಾಗಾಗಿ ಈ ಗ್ರಾಮೀಣ ಭಾಗದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ, ಸುಣ್ಣ-ಬಣ್ಣಕ್ಕೆ ಮತ್ತು ಅರ್ಚಕರಿಗೆ ತಸ್ತಿಕ್ ಹಣ ನೀಡುವುದು ಅಸಾಧ್ಯವಾಗಿದೆ ಎಂದರು.

ಈ ಹಿನ್ನಲೆಯಲ್ಲಿ ‘ಎ’ ವರ್ಗದ ದೇವಸ್ಥಾನಗಳಿಂದ ಸಂಗ್ರಹವಾಗುವ ನಿಧಿಯಲ್ಲಿ ಶೇ.10 ರ ಅನುದಾನವನ್ನು ಪ್ರತ್ಯೇಕಿಸಿ ‘ಸಿ’ ವರ್ಗದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಮತ್ತು ಅರ್ಚಕರ ಜೀವನಾಭಿವೃದ್ಧಿಗೆ ಬಳಸಲು ನಿರ್ಧರಿಸಿ, ರಾಜ್ಯದ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಅನುಮೋದನೆಗೊಂಡ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2024 ಕ್ಕೆ ರಾಷ್ಟ್ರಪತಿಗಳು ಅನುಮೋದನೆ ನೀಡಬೇಕೆಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ತಿದ್ದುಪಡಿ ಕಾನೂನಿನಲ್ಲಿ ಅರ್ಚಕರಿಗೆ ನೀಡುವ ತಸ್ತಿಕ್ ಹಣವನ್ನು ರೂ.5,000/- ಗಳಿಂದ ರೂ.10,000/- ಗಳಿಗೆ ಹೆಚ್ಚಿಸಬೇಕೆಂದು ನಮ್ಮ ಸಂಘಟನೆಯು ಇದೇ ಸಂದರ್ಭದಲ್ಲಿ ಒತ್ತಾಯಿಸುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿನ‌‌ ಸದಸ್ಯರಾದ ನಾಗೇಶರಾವ, ಹೊಳೆಮಡಿಲು ವೆಂಕಟೇಶ , ಜನಮೇಜಿರಾವ್, ಸಂಗಯ್ಯ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...