ಶಿವಮೊಗ್ಗ | ಕುವೆಂಪು ವಿವಿ ವಿರುದ್ಧ ಬೇಜವಾಬ್ದಾರಿ ಮೌಲ್ಯಮಾಪನ ಆರೋಪ; ಕ್ರಮಕ್ಕೆ NSUI ಆಗ್ರಹ

Date:

ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಯ ಮೌಲ್ಯಮಾಪನವನ್ನು ಡಿಜಿಟಲ್ ರೂಪದಲ್ಲಿ ನಡೆಸಿದ್ದು, ಫಲಿತಾಂಶದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ವಿವಿಯ ಆಡಳಿತ ಡಿಜಿಟಲ್ ಮೌಲ್ಯಮಾಪನಕ್ಕೆ ಸಾಕಷ್ಟು ತಯಾರಿ ನಡೆಸದೇ ಇರುವುದರಿಂದ ಬೇಕಾಬಿಟ್ಟಿ ಫಲಿತಾಂಶಗಳು ಬಂದಿದ್ದು, ವಿವಿಯ ನಿರ್ಲಕ್ಷ್ಯ, ಬೇಜವಾಬ್ದಾರಿ ತನವನ್ನು ಶಿವಮೊಗ್ಗ ಜಿಲ್ಲಾ NSUI ತೀವ್ರವಾಗಿ ಖಂಡಿಸಿದೆ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಮ್ಯಾನ್ಯುಯಲ್ ಮೌಲ್ಯಮಾಪನದಿಂದ ನಡೆಯುತ್ತಿದ್ದ ಅವ್ಯವಹಾರ ತಡೆಯುವ ನೆಪದಲ್ಲಿ ಕುವೆಂಪು ವಿವಿ ಡಿಜಿಟಲ್ ಮೌಲ್ಯಮಾಪನದ ಮೊರೆ ಹೋಗಿದೆ. ಆದರೆ, ಈ ಮೌಲ್ಯಮಾಪನದಿಂದ ಪ್ರತಿ ಕಾಲೇಜುಗಳಲ್ಲಿಯೂ ಬಿಕಾಂ ತರಗತಿಯ ಶೇ.60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಮರು ಮೌಲ್ಯಮಾಪನ ಮಾಡಿದಾಗ ಕೇವಲ 0, 5, 6 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿಯನ್ನ ಉತ್ತೀರ್ಣಗೊಳಿಸಲಾಗುತ್ತಿದೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಶಿವಮೊಗ್ಗ | ಕನ್ನಡ ಭಾಷೆಗೆ ವಿಶಿಷ್ಟವಾದ ಸ್ಥಾನವಿದೆ : ಪ್ರೊ. ಶರತ್ ಅನಂತಮೂರ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕ್ಷಾ ಶುಲ್ಕ, ಮರುಮೌಲ್ಯಮಾಪನ ಶುಲ್ಕ ಎಂದು ವಿದ್ಯಾರ್ಥಿಗಳಿಂದ ವಸೂಲಿ ಮಾಡುತ್ತಿರುವ ವಿಶ್ವವಿದ್ಯಾಲಯ, ವಿದ್ಯಾರ್ಥಿಗಳ ಫಲಿತಾಂಶದ ಜೊತೆ ಆಟವಾಡುತ್ತಾ ಅವರನ್ನು ಅತಂಕಕ್ಕೆ ದೂಡುತ್ತಿದೆ. ಕೂಡಲೇ ವಿವಿಯ ಕುಲಪತಿಗಳು ಈ ಬಗ್ಗೆ ಗಮನ ಹರಿಸಬೇಕು. ಡಿಜಿಟಲ್ ಮೌಲ್ಯಮಾಪನದಲ್ಲಿ ಆಗಿರುವ ಗೊಂದಲಗಳನ್ನು ಬಗೆಹರಿಸಬೇಕು. ವ್ಯವಸ್ಥಿತ ಪೂರ್ವಸಿದ್ಧತೆಯಿಲ್ಲದೇ ಡಿಜಿಟಲ್ ಮೌಲ್ಯಮಾಪನ ನಡೆಸಲು ಕಾರಣರಾದವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ಯಾವುದೇ ಶುಲ್ಕ ಪಡೆಯದೇ ಎಲ್ಲಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮರುಮೌಲ್ಯಮಾಪನ ಮಾಡಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ವತಿಯಿಂದ ವಿವಿ ಬಂದ್‌ನಂತಹ ತೀವ್ರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...