ಶಿವಮೊಗ್ಗ | ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ಬಂಧಿಸಿ : ಎನ್.ಎಸ್.ಯು.ಐ.

Date:

ಶಿವಮೊಗ್ಗ, ವಕೀಲರೊಬ್ಬರು ಅಕ್ಟೋಬರ್ 6ರಂದು ಸಿಜೆಐಗೆ ಶೊ ಯಿಂದ ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು,ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿದೆ.

ಈ ಸಂಬಂಧ ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ , ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರು ಪಿಐಎಲ್ ಪ್ರಕರಣವೊಂದರ ವಿಚಾರಣೆ ನಡೆಸುವ ಸಂದರ್ಭದಲ್ಲಿ ಹಿರಿಯ ವಕೀಲರೆಂದು ಹೇಳಿಕೊಳ್ಳುತ್ತಿರುವ ರಾಕೇಶ್ ಕಿಶೋರ್ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದು ಹಲ್ಲೆ ನಡೆಸಲು ಮುಂದಾಗಿದ್ದು, ಇದು ನಮ್ಮ ಸಂವಿಧಾನಕ್ಕೆ ಅಪಮಾನ ಮಾಡಿದಂತಾಗಿದೆ.

ಇದನ್ನು ನಾವು ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದರು.ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳೆಂದರೆ ಸಂವಿಧಾನದ ರಕ್ಷಕರು. ಅವರ ಮೇಲೆಯೇ ಈ ರೀತಿ ಹಲ್ಲೆ ನಡೆಸುವಂತಹ ಹೇಯಕೃತ್ಯವನ್ನು ನಾವು ಸಹಿಸುವುದಿಲ್ಲ. ಇದು ನಮ್ಮ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಇಡೀ ಭಾರತೀಯರ ಮನಸ್ಸಿಗೆ ಘಾಸಿಯನ್ನುಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಡಿಎಸ್ಎಸ್ ನ ಸಂಚಾಲಕ ರಂಗಪ್ಪ ಮಾತನಾಡಿ ಈ ಕೃತ್ಯ ನಡೆಸಲು ನ್ಯಾಯಾದೀಶರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಮನಸ್ಸಿನಿಂದ ಈ ತರಹ ಹೇಯ ಕೃತ್ಯ ಎಸಗಿರಬಹುದು ಎಂಬ ಅನುಮಾನಗಳು ಶುರುವಾಗಿದೆ ಇದು ನಮ್ಮ ಸಂವಿಧಾನ ಶಿಲ್ಪಿ ಡಾ// ಬಿ ಆರ್ ಅಂಬೇಡ್ಕರ್ ರವರಿಗೆ ಮಾಡಿದ ಅವಮಾನವಾಗಿದೆ ಇದನ್ನು ತೀವ್ರವಾಗಿ ಪರಿಗಣಿಸಿ ತನಿಖೆಗೆ ಒಳಪಡಿಸಬೇಕು.

ಹಲ್ಲೆ ನಡೆಸಿದ ವಕೀಲರನ್ನು ವಕೀಲರ ಪರಿಷತ್ ಅಮಾನತ್ತು ಮಾಡಿದೆ. ಆದರೆ, ರಾಕೇಶ್ ಕಿಶೋರ್‍ರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು. ಇಲ್ಲದೇ ಹೋದಲ್ಲಿ ಇಂತಹ ಘಟನೆಗಳು ಮರುಕಳಿಸುವ ಸಾಧ್ಯತೆ ಇದೆ. ಆದ್ದರಿಂದ ರಾಕೇಶ್ ಕಿಶೋರ್‍ರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸಿಸದರು.

ಈ ಸಂದರ್ಭದಲ್ಲಿ ವಕೀಲರಾದ ಪ್ರಸನ್ನ,NSUI ಜಿಲ್ಲಾಧ್ಯಕ್ಷ ವಿಜಯ, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ಬಾಲಾಜಿ, ಚಂದ್ರೋಜಿ ರಾವ್, ಆದಿತ್ಯ, ಸುಭಾನ್, ವರುಣ್ ವಿ ಪಂಡಿತ್ , ಶಬರೀಶ್, ಆಕಾಶ್, ತರುಣ್, ಹಾಲಸ್ವಾಮಿ, ಕರಣ, ಮನೋಜ್, LLB ಕಾಲೇಜು ಘಟಕದ ಅಧ್ಯಕ್ಷ ಲೋಹಿತ್ ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...