ಶಿವಮೊಗ್ಗ | ಧಾರ್ಮಿಕ ಆಚರಣೆಗಳು ಶಾಂತಿಯುತವಾಗಿರಲಿ ; ಗುರುದತ್ತ ಹೆಗಡೆ

Date:

ಶಿವಮೊಗ್ಗ ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಶಿವಮೊಗ್ಗದಲ್ಲಿ ನಡೆಯುವ ಯಾವುದೇ ಧರ್ಮದ ಧಾರ್ಮಿಕ ವಿಧಿಗಳು, ಹಬ್ಬದ ಆಚರಣೆಗಳು ಶಾಂತಿಯುತವಾಗಿ ನಡೆಯುತ್ತಿವೆ. ಮುಂದಿನ ದಿನಗಳಲ್ಲಿಯೂ ಸದಾ ಕೂಡಿ ಬಾಳುವ, ನಾಡಿಗೆ ಏಕತೆ, ಭಾವೈಕ್ಯತೆಯ ಸಂದೇಶ ಸಾರುವ ನೆಲ ನಮ್ಮದಾಗಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಅವರು ಬುಧವಾರ ಮುಸ್ಲಿಂ ಸಮುದಾಯದ ಪವಿತ್ರ ಹಬ್ಬ ಬಕ್ರೀದ್ ಆಚರಣೆಯ ಕುರಿತು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಾಂತಿ ಸೌಹಾರ್ಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಬ್ಬಗಳು ಸಡಗರ, ಸಂಭ್ರಮಗಳಿಂದ ಆಚರಿಸಬೇಕು. ಶಾಂತಿ ಸಂದೇಶದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ಕುಟುಂಬಗಳ ನೆಮ್ಮದಿಯ ಬದುಕಿದೆ. ವೈಯಕ್ತಿಗೆ ಏಳಿಗೆ ಅಡಗಿದೆ . ವಿಶೇಷವಾಗಿ ಇಂತಹ ಕಾಲದಲ್ಲಿ ಎಲ್ಲರೂ ನಿರ್ಭಯವಾಗಿ ಆತಂಕ ರಹಿತ ಜೀವನ ನಿರ್ವಹಿಸುವಂತಾಗಬೇಕು ಎಂದ ಅವರು, ಎಲ್ಲರೂ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು. ನಡೆಯುವ ಸಂಭಾವ್ಯ ಅಹಿತಕರ ಘಟನೆಗಳ ಸಂದರ್ಭದಲ್ಲಿ ಜಿಲ್ಲಾಡಳಿತ ತಮ್ಮ ನೆರವಿಗೆ ಧಾವಿಸಲಿದೆ ಎಂದವರು ನುಡಿದರು.

ಒಬ್ಬ ವ್ಯಕ್ತಿಯ ನೋವಿನಲ್ಲಿ ಮತ್ತೊಬ್ಬರು ಸಂಭ್ರಮಿಸುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ಪರಸ್ಪರರಲ್ಲಿ ಸಾಮರಸ್ಯ, ಸೌಹಾರ್ಧತೆ ಮೂಡಬೇಕು. ಅಂತಹ ವಾತಾವರಣವನ್ನು ನಾವೇ ಸೃಜಿಸಿಕೊಳ್ಳಬೇಕು. ವದಂತಿಗಳನ್ನು ನಂಬಬೇಡಿ ಹಾಗೂ ಅವುಗಳನ್ನು ಹರಡಬೇಡಿ. ಯುವಜನತೆ ತಾಳ್ಮೆಯಿಂದ ವರ್ತಿಸುವಂತೆ ಹಿರಿಯರು ಸಕಾಲಿವಾಗಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.ಎಲ್ಲರೂ ಕಾನೂನನ್ನು ಗೌರವಿಸಿ, ಅಂತೆಯೇ ಪಾಲಿಸಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕಸ್ಮಿಕ ಘಟನೆಗಳು ನಡೆದಾಗ ತಕ್ಷಣದ ಅಗತ್ಯಗಳಿಗಾಗಿ ಪೊಲೀಸ್‌ಇಲಾಖೆ ಅಧಿಕಾರಿಗಳು ಹಾಗೂ ಸಮೀಪದ ಅಧಿಕಾರಿಗಳನ್ನು ಸಂಪರ್ಕಿಸಿ, ಚರ್ಚಿಸಿ. ತಕ್ಷಣದ ಪರಿಹಾರಕ್ಕಾಗಿ ಏಕಪಕ್ಷೀಯವಾದ ಆತುರದ ನಿರ್ಧಾರಗಳು ಬೇಡ ಎಂದವರು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್‌ಅವರು ಮಾತನಾಡಿ, ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಎಲ್ಲಾ ಧರ್ಮದ ಬಾಂಧವರು ಸಹಕರಿಸಬೇಕು. ಸುಳ್ಳು ಸುದ್ದಿಗಳಿಗೆ ಕಿವಿಕೊಡಬೇಡಿ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...