ಶಿವಮೊಗ್ಗ | ಮೆಕ್ಕೆಜೋಳ ಕಳ್ಳತನ;ಆರೋಪಿಗಳ ಬಂಧನ

Date:

ಒಣಗಿಸಲು ಹಾಕಿದ್ದ ಹಸಿ ಮೆಕ್ಕೆಜೋಳ ಕಳವು ಮಾಡಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಸೀತೆಕೊಂಡ ಗ್ರಾಮದ ನಿವಾಸಿ ನವೀನ (21) ಹಾಗೂ ಆಪಿನಕೊಪ್ಪದ ನಿವಾಸಿ ರಾಜೇಂದ್ರ (20) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.ಬಂಧಿತರಿಂದ 55 ಸಾವಿರ ರೂ. ಮೌಲ್ಯದ ಮೆಕ್ಕೆಜೋಳ ಹಾಗೂ ಕೃತ್ಯಕ್ಕೆ ಬಳಸಿದ್ದ 9 ಲಕ್ಷ ರೂ. ಮೌಲ್ಯದ ಅಶೋಕ ಲೈಲ್ಯಾಂಡ್ ಸರಕು ಸಾಗಾಣೆ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಇಲಾಖೆ ಮೇ 24 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

22-05-2025 ರಂದು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಸೋಗಿ ಗ್ರಾಮದ ಗೋಪಾಲಪ್ಪ, ಕೊಳಗಿ ಗ್ರಾಮದ ಸಂದೀಪ ಮತ್ತು ಕೊಳಗಿ ತಾಂಡ ಗ್ರಾಮದ ಶಿವಕುಮಾರ ಎಂಬುವರು ಒಣಗಿಸಲು ಹಾಕಿದ್ದ ಸುಮಾರು 25 ಕ್ವಿಂಟಾಲ್ ತೂಕದ ಹಸಿ ಮೆಕ್ಕೆಜೋಳ ಕಳವು ಮಾಡಲಾಗಿತ್ತು. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕಾರಿಪುರ ಡಿವೈಎಸ್ಪಿ ಕೇಶವ ಕೆ ಇ ಮೇಲ್ವಿಚಾರಣೆಯಲ್ಲಿ ಇನ್ಸ್’ಪೆಕ್ಟರ್ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಪ್ರಶಾಂತ್ ಕುಮಾರ್ ಟಿ ಬಿ, ಸಿಬ್ಬಂದಿಗಳಾದ ಸಿ.ಹೆಚ್.ಸಿ ಸಂತೋಷ್ ಕುಮಾರ್ ಆರ್, ಸಿ.ಪಿ.ಸಿ ರಾಕೇಶ್ ಜಿ, ಸಲ್ಮಾನ್ ಖಾನ್ ಹಾಜಿ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...