ಶಿವಮೊಗ್ಗ | ಯುವತಿಯ ಮೊಬೈಲ್ ಕದ್ದು ಕೋತಿಯ ಕಪಿಚೇಷ್ಟೆ

Date:

ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಲ್ಯಾಬ್ ಟಕ್ನಿಷಿಯನ್ ಸಿಬ್ಬಂದಿಯೊಬ್ಬರ ಮೊಬೈಲ್ ಕಸಿದುಕೊಂಡ ಮಂಗವೊಂದು ಮರವೇರಿ ಕುಳಿತ ಘಟನೆ ಬುಧವಾರ ಅಂದರೆ ಇಂದು ಮಧ್ಯಾಹ್ನ ನಡೆಯಿತು.

ನಗರದ ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೆಲಸ ಮಾಡುತ್ತಿರುವ ಯುವತಿ ತನ್ನ ಮೊಬೈಲ್‌ನ್ನು ಕಿಟಕಿಯ ಬಳಿ ಇಟ್ಟು ಕೆಲಸ ಮಾಡುತ್ತಿದ್ದರು, ಆ ವೇಳೆ ಸ್ಥಳಕ್ಕೆ ಬಂದ ಮಂಗವೊಂದು ಕಿಟಕಿಯ ಪಕ್ಕದಲ್ಲಿ ಇಟ್ಟಿದ್ದ ಮೊಬೈಲನ್ನು ತೆಗೆದುಕೊಂಡು ಆಸ್ಪತ್ರೆಯ ಪಕ್ಕದಲ್ಲಿದ್ದ ದೊಡ್ಡ ಮರದ ತುದಿಗೆ ಹೋಗಿ ಕುಳಿತಿದೆ.ಮೊಬೈಲ್ ಕಸಿದುಕೊಂಡು ಆಸ್ಪತ್ರೆ ಪಕ್ಕದ ಮರವೇರಿ ಕುಳಿತಿದ್ದ ಮಂಗ ಆಗಾಗ ಮೊಬೈಲನ್ನು ಎದೆಗೆ ಅವಚಿಕೊಳ್ಳುತ್ತಿತ್ತು. ಕೆಲವೊಮ್ಮೆ ಮೊಬೈಲ್ ಪರದೆ ಗಮನಿಸುತಿತ್ತು. ಇನ್ನು ಕೆಲವೊಮ್ಮೆ ಮೊಬೈಲ್ ಪರದೆ ಮೇಲೆ ಬೆರಳು ಆಡಿಸುತ್ತಾ, ಮೊಬೈಲ್ ಕಿವಿಗೆ ಹಿಡಿದು ಕುಳಿತಿತ್ತು.

1001737619

ಆಗ ಅಲ್ಲಿದ್ದ ಜನರು ಮಂಗನಿಗೆ ಬಾಳೆಹಣ್ಣು ನೀಡಿ ಮೊಬೈಲ್ ಪಡೆಯುವ ಪ್ರಯತ್ನವನ್ನು ಮಾಡಿದರು ಸಹ ಮಂಗ ಮೊಬೈಲ್‌ನ್ನು ಗಟ್ಟಿಯಾಗಿಯೇ ಹಿಡಿದು ಕುಳಿತಿತ್ತು.ಹೀಗೆ ಸುಮಾರು ಒಂದು ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್‌ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್‌ನ್ನು ಹಿಂಪಡೆಯುವ ಸಾಕಷ್ಟು ಪ್ರಯತ್ನಗಳು ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಮಂಗ ತನ್ನಷ್ಟಕ್ಕೆ ತಾನು ಮಾತ್ರ ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಅದನ್ನು ನೋಡಲು ರಸ್ತೆಯಲ್ಲಿ ಹಲವಾರು ಜನ ಸೇರಿದ್ದರು. ಇದರಿಂದ ಕೆಲಕಾಲ ರಸ್ತೆಯಲ್ಲಿ ಸಂಚಾರ ದಟ್ಟಣೆಯೂ ಸಹ ಆಯಿತು. ಅದು ಸಹ ಭಯದಿಂದ ಕೆಳಗೆ ಬರಲೇ ಇಲ್ಲ.

ಕೊನೆಗೆ ಮಂಗವು ಬಾಳೆ ಹಣ್ಣನ್ನು ನೊಡಿ ಆಸ್ಪತ್ರೆಯ ಸ್ಲ್ಯಾಬ್ ಮೇಲೆ ಬಂದಿತು. ಆಗ ಯುವಕರು ಪಟಾಕಿ ಸಿಡಿಸಿದರು.ಇದರಿಂದ ಭಯಗೊಂಡ ಮಂಗ ಮೊಬೈಲ್‌ನ್ನು ಕೈಬಿಟ್ಟು ಬಾಳೆಹಣ್ಣು ತೆಗೆದುಕೊಂಡು ಹೋಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...