ಶಿವಮೊಗ್ಗ | ಮದರ್ ತೆರೇಸಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಎಸ್‌ಎಸ್ಎಲ್‌ಸಿಯಲ್ಲಿ ಶೇ.100 ರಷ್ಟು ಫಲಿತಾಂಶ

Date:

ಭದ್ರಾವತಿ ತಾಲ್ಲೂಕಿನ ಹಳೇಜೇಡಿಕಟ್ಟೆಯಲ್ಲಿ ಶಾಂತಿನಿಕೇತನ ಚಾರಿಟಬಲ್ ಸೊಸೈಟಿ (ರಿ) ವತಿಯಿಂದ ನಡೆಯುತ್ತಿರುವ ಮದರ್ ತೆರೇಸಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ 2024-25 ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ.

ಪರೀಕ್ಷೆಗೆ ಒಟ್ಟು 14 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ 2 ವಿದ್ಯಾರ್ಥಿನಿಯರು ಹಾಗೂ 12 ವಿದ್ಯಾರ್ಥಿಗಳಿದ್ದರು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡಯಾಗಿರುತ್ತಾರೆ. ಅದರಲ್ಲಿ 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್(ಅತ್ಯುನ್ನತ ಶ್ರೇಣಿ) ಪಡೆದಿದ್ದು, ಉಳಿದ 10 ವಿದ್ಯಾರ್ಥಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ.

ವಿಶೇಷತೆಯೇನೆಂದರೆ, ರಾಜ್ಯದಲ್ಲಿಯೇ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗಳಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದವರಲ್ಲಿ, ಪ್ರಥಮ ಸ್ಥಾನವನ್ನು ಹೇಮಾ ಮತ್ತು ದ್ವಿತೀಯ ಸ್ಥಾನವನ್ನು ಜೀವನ್ ಜ್ಯೋತಿ ಪಡೆದಿರುತ್ತಾರೆ. ಇವರ ಸಾಧನೆಗೆ ಕಾರಣಕರ್ತರಾದ ಆಡಳಿತ ಮಂಡಳಿ, ಶಾಲಾ ಶಿಕ್ಷಕರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ರೆವರೆಂಡ್ ಫಾದರ್ ರಾಬಿಟ್ ಮಾಧೂರವರು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...