ಶಿವಮೊಗ್ಗ | ಮಳೆಗೆ 527 ಕೋಟಿ ರೂ. ವೆಚ್ಚದ ಹೊಸ ರಾಷ್ಟ್ರೀಯ ಹೆದ್ದಾರಿ ಅಧೋಗತಿ

Date:

ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದರೆ, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಈ ನಡುವೆ, ಒಂದು ತಿಂಗಳ ಹಿಂದೆಯಷ್ಟೇ ಕಾಮಗಾರಿ ಮುಗಿದು, ಉದ್ಘಾಟನೆಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯೊಂದು ಮಳೆಯ ಹೊಡೆತಕ್ಕೆ ಬಿರುಕು ಬಿಟ್ಟಿದೆ. ರಸ್ತೆ ಕಾಮಗಾರಿ ಕುರಿತು ಅನುಮಾನಗಳನ್ನು ಹುಟ್ಟುಹಾಕಿದೆ.

ಶಿವಮೊಗ್ಗ ಮತ್ತು ಚಿತ್ರದುರ್ಗ ನಡುವೆ ಸಂಪರ್ಕ ಒದಗಿಸುವ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ರಸ್ತೆಯು ಮಳೆಯಿಂದಾಗಿ ಬಿರುಕುಬಿಟ್ಟಿದೆ. ಇದು, ಕಳಪೆ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-13ಯ 106 ಕಿ.ಮೀ ರಸ್ತೆಯನ್ನು 527 ಕೋಟಿ ರೂ. ವ್ಯಚ್ಛದಲ್ಲಿ ಹೊಸದಾಗಿ ನಿರ್ಮಾಣ ಮಾಡಲಾಗಿತ್ತು. ಈ ಹೆದ್ದಾರಿಗಾಗಿ ಹೊಳೆಹೊನ್ನೂರು ಬಳಿ ಭದ್ರಾ ನದಿಗೆ ಅಡ್ಡಲಾಗಿ ಸೇತುವೆಯನ್ನೂ ನಿರ್ಮಾಣ ಮಾಡಲಾಗಿದೆ. ಹೆದ್ದಾರಿಯನ್ನು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಕಳೆದ ತಿಂಗಳು ಉದ್ಘಾಟಿಸಿದ್ದರು. ಆದರೆ, ಉದ್ಘಾಟನೆಯಾದ ಒಂದೇ ತಿಂಗಳಲ್ಲಿ ರಸ್ತೆ ಬಿರುಕು ಬಿಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆಯನ್ನು ಕಳಪೆ ಕಾಮಗಾರಿ ನಡೆಸಿ ನಿರ್ಮಾಣ ಮಾಡಲಾಗಿದೆ. ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದ ಕಂಪನಿ ಮತ್ತು ಎಂಜಿನಿಯರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪ್ರತಿಭಟನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...