ಶಿವಮೊಗ್ಗ | ಅ. 26ರಂದು ದಿವಂಗತ ಎಸ್ ಬಂಗಾರಪ್ಪರವರಿಗೆ ವಿಶ್ವಮಾನವ ಪ್ರಶಸ್ತಿ ಪ್ರದಾನ

Date:

ಶಿವಮೊಗ್ಗ, ಕರ್ನಾಟಕದ ಕ್ರಾಂತಿಕಾರಿ ಮುಖ್ಯಮಂತ್ರಿಗಳಾಗಿದ್ದ ಬಡ ಯೋಜನೆಗಳನ್ನು ಜನರ ಅಭಿವೃದ್ಧಿಗಾಗಿ ಅನೇಕ ಹೊಸ ಮುಖ್ಯಮಂತ್ರಿಗಳಾಗಿದ್ದ ಎಸ್ ಬಂಗಾರಪ್ಪ ರವರಿಗೆ ಮಾನವ ಹಕ್ಕುಗಳ ಹೋರಾಟ ಪ್ರಜ್ಞಾವಂತ, ಬಡವರ ಬಂಧುಗಳಾದ ಸಮಿತಿಯಿಂದ ಅಕ್ಟೋಬರ್ 26ರಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಸಮಾಜ ಸೇವೆಗಾಗಿ “ವಿಶ್ವಮಾನವ” ಎಂಬ ಬಿರುದಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಮುಖಂಡ ಬಿ ಎನ್ ರಾಜು ತಿಳಿಸಿದರು.

ಶಿವಮೊಗ್ಗ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಿದ್ದವರು ಮುಖ್ಯಮಂತ್ರಿಗಳಾಗಿದ್ದ ಎಸ್. ಬಂಗಾರಪ್ಪನವರು. ಬಗರ್‌ಹುಕುಂ ರೈತರ ಬೆನ್ನೆಲುಬಾಗಿ ನಿರಂತರ ಕ್ರಾಂತಿಕಾರಿ ಹೋರಾಟ ನಡೆಸಿ ಕಾಗೋಡು ಸತ್ಯಾಗ್ರಹದ ಹೋರಾಟದ ಮುಂಚೂಣಿಯಲ್ಲಿ ಇದ್ದು, ಆಶ್ರಯ, ಆರಾಧನ, ಅಕ್ಷಯ, ಅಕ್ಷರ ತುಂಗಾ, ಗ್ರಾಮೀಣ ಕೃಪಾಂಕ, ರೈತರಿಗೆ ಉಚಿತ ವಿದ್ಯುತ್, ಯೋಜನೆಗಳನ್ನು ಜಾರಿ ಮಾಡಿ ರಾಜ್ಯದ ಕೋಟ್ಯಾಂತರ ರೈತರಿಗೆ ಬಡ ಜನರಿಗೆ ಆಶ್ರಯ ನೀಡಿದ್ದಾರೆ. ಕಡಿಮೆ ಅವಧಿಯಲ್ಲಿಯೇ ಹೆಚ್ಚು ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಿದವರು.ಕ್ರಾಂತಿಕಾರಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ರವರು ಆಗಿದ್ದವರು ಎಂದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಗೋಡು ಸತ್ಯಾಗ್ರಹದ ರೂವಾರಿಗಳು ಮಾಜಿ ಸಚಿವರು ಮಾಜಿ ವಿಧಾನ ಸಭಾ ಅಧ್ಯಕ್ಷರು, ಪ್ರಜ್ಞಾವಂತ ರಾಜಕಾರಣಿಗಳಾದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪರವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಮುತ್ಸದ್ಧಿ ರಾಜಕಾರಣಿಗಳು ಸಿ.ಪಿ.ಐ ರಾಜ್ಯಮಂಡಳಿ ಸದಸ್ಯರು ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ವಹಿಸಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವಮಾನವ ಪ್ರಶಸ್ತಿಯನ್ನು ಬಂಗಾರಪ್ಪರವರ ಪರವಾಗಿ ಅವರ ಸುಪುತ್ರರಾದ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧುಬಂಗಾರಪ್ಪ ಸ್ವೀಕರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದ ಬಿ ವೈ ರಾಘವೇಂದ್ರ, ಶಾಸಕ ಬೆಳೂರು ಗೋಪಾಲಕೃಷ್ಣ , ಶಾಸಕ ಬಿ ಕೆ ಸಂಗಮೇಶ್ವರ, ಬಲ್ಕಿಸ್ ಬಾನು, ಶಾಸಕಿ ಶಾರದ ಪೂರ್ಯಾನಾಯ್ಕ್ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...