ಶಿವಮೊಗ್ಗ | ಕೋಣಂದೂರಿನಲ್ಲಿ ಕಾಳುಮೆಣಸು ವ್ಯಾಪಾರಿಗೆ 5.5 ಲಕ್ಷ ರೂ. ವಂಚನೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ₹5.5 ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ಮಾಲೀಕರೊಬ್ಬರು ಕಳೆದ ಒಂದು ವರ್ಷದಿಂದ ಇಬ್ಬರು ವ್ಯಕ್ತಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದರು.

ಜುಲೈ 8 ರಂದು, ಈ ಇಬ್ಬರು ಆರೋಪಿಗಳು ಕಾಳುಮೆಣಸು ನೀಡುವುದಾಗಿ ಹೇಳಿ ಮಂಡಿ ಮಾಲೀಕರಿಂದ ಮುಂಗಡವಾಗಿ ಹಣ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಬ್ಬ ಆರೋಪಿ ₹2.5 ಲಕ್ಷ ಮತ್ತು ಇನ್ನೊಬ್ಬ ಆರೋಪಿ ₹2.5 ಲಕ್ಷ – ಹೀಗೆ ಒಟ್ಟು ₹5 ಲಕ್ಷ ಪಡೆದಿದ್ದಾರೆ ಎನ್ನಲಾಗಿದೆಆದರೆ, ಹಣ ಪಡೆದ ನಂತರವೂ ಆರೋಪಿಗಳು ಕಾಳುಮೆಣಸು ಪೂರೈಸದೆ ಮತ್ತು ಹಣವನ್ನು ಸಹ ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆ ಎಂದು ಮಂಡಿ ಮಾಲೀಕರು ಆರೋಪಿಸಿದ್ದಾರೆ.

ಈ ವಂಚನೆಯ ಕುರಿತು ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...