ಶಿವಮೊಗ್ಗ | ಪೊಲೀಸ್‌ ಹುತಾತ್ಮರ ದಿನಾಚರಣೆ; ಕರ್ತವ್ಯದಲ್ಲಿ ಪ್ರಾಣ ತ್ಯಾಗಿಸಿದ ಯೋಧರಿಗೆ ನಮನ

Date:

ಶಿವಮೊಗ್ಗ, ದೇಶದ ಕಾನೂನು ಸುವ್ಯವಸ್ಥೆ ಮತ್ತು ರಾಷ್ಟ್ರದ ರಕ್ಷಣೆಯಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸ್ಮರಿಸುವ ‘ಪೊಲೀಸ್ ಹುತಾತ್ಮರ ದಿನಾಚರಣೆ’ಯನ್ನು ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು.

ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. 1959ರ ಅಕ್ಟೋಬರ್ 21ರಂದು ಲಡಾಖ್‌ನ ಹಾಟ್ ಸ್ಪ್ರಿಂಗ್ಸ್‌ನಲ್ಲಿ ಚೀನೀ ಸೈನಿಕರ ಆಕ್ರಮಣದಿಂದಾಗಿ ಡಿ.ಎಸ್.ಪಿ. ಕರಣ್ ಸಿಂಗ್ ನೇತೃತ್ವದ 10 ಸಿಬ್ಬಂದಿಗಳು ಹುತಾತ್ಮರಾದ ದಾರುಣ ಘಟನೆಯ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.

1002432674

ದೇಶದ ಸುವ್ಯವಸ್ಥೆ ಮತ್ತು ರಕ್ಷಣೆಯ ಕರ್ತವ್ಯ ನಿರ್ವಹಿಸುತ್ತಿರುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್‌ ಯೋಧರ ಸ್ಮರಣಾರ್ಥವಾಗಿ, ಪೊಲೀಸ್‌ ಹುತಾತ್ಮರ ದಿನಾಚರಣೆ ಮಂಗಳವಾರ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಪೊಲೀಸ್‌ ಕವಾಯತು ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್‌ ಅಧ್ಯಕ್ಷತೆ ವಹಿಸಿದ್ದು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್‌ ಎನ್‌ (ಐಎಎಸ್‌) ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ ಕುಮಾರ್‌ (ಐಪಿಎಸ್‌) ಅವರು, ಕರ್ತವ್ಯಪರ ಯೋಧರ ತ್ಯಾಗವನ್ನು ಸ್ಮರಿಸಿ ನಮನ ಸಲ್ಲಿಸಿದರು. 2024ರ ಸೆಪ್ಟೆಂಬರ್‌ 1ರಿಂದ 2025ರ ಆಗಸ್ಟ್‌ 31ರವರೆಗೆ ದೇಶದಾದ್ಯಂತ ಒಟ್ಟು 191 ಮಂದಿ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಪ್ರಾಣ ತ್ಯಾಗ ಮಾಡಿದ್ದಾರೆ. ಇದರಲ್ಲಿ ಕರ್ನಾಟಕ ರಾಜ್ಯದ 8 ಮಂದಿ ಸೇರಿದ್ದಾರೆ ಎಂದು ಅವರು ತಿಳಿಸಿದರು.

1002432660

ಹುತಾತ್ಮರ ಹೆಸರುಗಳನ್ನು ವಾಚಿಸಿ, ಹೂಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಲಾಯಿತು. ರಾಜ್ಯದ ಪೊಲೀಸ್‌ ಇಲಾಖೆಯ ಶೌರ್ಯ, ಸೇವಾ ಮನೋಭಾವ ಮತ್ತು ತ್ಯಾಗದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಈ ದಿನದ ಮಹತ್ವವನ್ನು ಎಲ್ಲರೂ ಸ್ಮರಿಸಿದರು.ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ, ನಿವೃತ್ತ ಯೋಧರು ಹಾಗೂ ನಾಗರಿಕರು ಪಾಲ್ಗೊಂಡು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...