ಶಿವಮೊಗ್ಗ | ಮೇಗರವಳ್ಳಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ; ಐಐಟಿ ಪ್ರವೇಶ ಪಡೆದ ಸುಶಾಂತ್ ಪ್ರಭುಗೆ ಸನ್ಮಾನ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ಮತ್ತು ಬಾಲಾಜಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೇಗರವಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಐಟಿಗೆ ಪ್ರವೇಶ ಪಡೆದ ಸುಶಾಂತ್ ಪ್ರಭುವಿಗೆ ಗೌರವ ಸನ್ಮಾನ ‌‌ಮಾಡಲಾಯಿತು.‌

1001841319

ಇತ್ತೀಚಿಗೆ, ವಿಜೇತ ಎಂ ಕೆ ಇವರ ಸಾರಥ್ಯದಲ್ಲಿ ಮೇಗರವಳ್ಳಿ ಪ್ರೌಢಶಾಲೆಯಲ್ಲಿ ಕಲಿತು, ಕಳೆದ ವರ್ಷ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 5 ನೇ ರ್ಯಾಂಕ್ ಪಡೆದ ವಿದ್ಯಾರ್ಥಿ ಸುಮುಖ್ ಸೇರಿದಂತೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಹಾಗೂ ಐಐಟಿ ಪ್ರವೇಶ ಪಡೆದ, ಮೇಗರವಳ್ಳಿಯ ಶ್ರೀಮತಿ ಸುಜಾತ ಮತ್ತು ನರಸಿಂಹ ಪ್ರಭು ಅವರ ಸುಪುತ್ರ ಸುಶಾಂತ್ ಪ್ರಭು ಅವರಿಗೆ , ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ಮತ್ತು ಬಾಲಾಜಿ ಸ್ಪೋರ್ಟ್ಸ್ ಕ್ಲಬ್ ಮೇಗರವಳ್ಳಿ ಇವರುಗಳ ವತಿಯಿಂದ ಸನ್ಮಾನ ಮಾಡಲಾಯಿತು, ಹಾಗೂ ಪ್ರತಿ ವಿದ್ಯಾರ್ಥಿಗೂ ನಗದು ವಿದ್ಯಾರ್ಥಿ ವೇತನ ನೀಡುವುದರೊಂದಿಗೆ, ಶಾಲು, ಹಾರ ಹೊದಿಸಿ, ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನ ಮಾಡಲಾಯಿತು.

ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ, ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷರಾದ ಬಾಳೇಹಳ್ಳಿ ಪ್ರಭಾಕರ್ ಮಾತಾನಾಡಿ, ಮೇಗರವಳ್ಳಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಲಲಿತಮ್ಮ ಅವರ ಹೆಸರಿನಲ್ಲಿ ಅವರ ಸುಪುತ್ರ ವಿಜೇತ ಶೆಟ್ಟಿ ಮಾಡುತ್ತಿರುವ ಇಂತಹ ಕಾರ್ಯಗಳು ಸಮಾಜಕ್ಕೆ ಮಾದರಿಯಾದುದು ಎಂದರು, ಜೊತೆಗೆ ‌ಮಕ್ಕಳಿಗೆ ನಗದು ವಿದ್ಯಾರ್ಥಿ ವೇತನ ನೀಡಿ ಸನ್ಮಾನ ಮಾಡಿರುವುದು ನಮಗೆಲ್ಲಾ ಮಾದರಿ ಕಾರ್ಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ದಿನಗಳಲ್ಲಿ ಪ್ರೋತ್ಸಾಹ ನೀಡಲು ಇವರಿಗೆ ಇನ್ನಷ್ಟು ಶಕ್ತಿ ಸಿಗಲಿ ಹಾಗೂ ಎಲ್ಲಾ ಮಕ್ಕಳು ಮುಂದಿನ ದಿನಗಳಲ್ಲಿ ಇಂತಹ ಕಾರ್ಯದ ಮಹತ್ವವನ್ನು ಅರಿತು ಉತ್ತಮ ರೀತಿಯಲ್ಲಿ ಅಧ್ಯಯನ ಮಾಡಿ, ಇದೇ ರೀತಿಯಲ್ಲಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ, ಬಾಳೇಹಳ್ಳಿ ಪ್ರಭಾಕರ್, ವಿಜೇತ ಎಂ ಕೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪಟೇಲ್ ವೆಂಕಟೇಶ ಹೆಗಡೆ, ಗ್ರಾಮ ಪಂಚಾಯತಿ ಸದಸ್ಯರಾದ ಅಜಿತ್ ಅಣ್ಣುವಳ್ಳಿ, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು ಪೋಷಕರು, ಸಾಧಕ ಮಕ್ಕಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...