ಶಿವಮೊಗ್ಗ | ಬೆಳೆಹಾನಿ ಸೂಕ್ತ ಪರಿಹಾರ ನೀಡಿ ; ರಾಜ್ಯ ರೈತ ಸಂಘ ಹಸಿರು ಸೇನೆ ಪ್ರತಿಭಟನೆ

Date:

ಸೊರಬ, ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆ ಆಗಿದ್ದರಿಂದ ಬೆಳೆಹಾನಿಯಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಹಾಗೂ ಹೆಸಿರು ಸೇನೆ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಹಾಲೇಶ್ ಗೌಡ ಮಾತನಾಡಿ, ತಾಲೂಕಿನಲ್ಲಿ ಕಳೆದ ಮೇ ತಿಂಗಳಿನಿಂದ ವಿಪರೀತ ಮಳೆಯಾದ ಪತರಿಣಾಮ ರೈತರು ಬೆಳೆದಿರುವ ಜೋಳ, ಅಡಿಕೆ, ಶುಂಠಿ, ಕಬ್ಬು, ಭತ್ತ ಇನ್ನಿತರ ಬೆಳೆಗಳು ಸಂಪೂರ್ಣ ನಾಶವಾಗಿದೆ. ಇದರಿಂದ ರೈತ ಕೂಲಿಕಾರ್ಮಿಕರಿಗೆ ದೈನಂದಿನ ಜೀವನ ನಡೆಸುವುದು ಕಷ್ಟವಾಗಿದೆ.

ಅಲ್ಲದೆ, ಬೆಳೆದ ಬೆಳೆಗೆ ಸರಿಯಾದ ವೈಜ್ಞಾನಿಕ ಬೆಲೆ ಸಿಗದೇ ಕೃಷಿಗಾಗಿ ಮಾಡಿದ ಸಾಲ ತೀರಿಸಲು ರೈತರು ಹೆಣಗಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಎಸ್. ಬಾಪಟ್ ಮಾತನಾಡಿ, ರೈತರು ವ್ಯವಸಾಯ ಸಹಕಾರ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮಾಡಿದ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಸರ್ಕಾರದಿಂದ ಬೆಳೆ ಪರಿಹಾರ ಬಿಡುಗಡೆ ಮಾಡಿಸಬೇಕು. ತಾಲೂಕಿನಲ್ಲಿದ್ದಂತ ಹದಗೆಟ್ಟ ರಸ್ತೆಗಳನ್ನ ದುರಸ್ತಿ ಮಾಡಬೇಕು ಎಂದು ಅಗ್ರಹಿಸಿದರು.ಪ್ರ

ತಿಭಟನೆಯಲ್ಲಿ ರೈತ ಸಂಘದ ಗೌರವಾಧ್ಯಕ್ಷ ಈರಪ್ಪ ಪ್ಯಾಟಿ, ಉಪಾಧ್ಯಕ್ಷ ಲೋಕಪ್ಪ, ವಿರೂಪಾಕ್ಷಪ್ಪ, ವಿಕ್ರಂ ಪಾಟೀಲ್, ಲೋಕಪ್ಪ, ಬಂಗಾರಪ್ಪ, ಶೇಖರಪ್ಪ, ಗದಿಗೆಪ್ಪಗೌಡ, ಕೆರಿಯಪ್ಪ, ಹೆಚ್.ಸಿ. ನಾಗರಾಜ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...