ಶಿವಮೊಗ್ಗ | ವಾರ್ಡ್ ನಂ.34ರಲ್ಲಿ ಮೂಲಭೂತ ಸೌಕರ್ಯ ಒದಗಿಸಿ : ನಿಸ್ವಾರ್ಥ ಜನಶಕ್ತಿ ವೇದಿಕೆಯ ಸಂಸ್ಥಾಪಕ ಸಮೀವುಲ್ಲಾ ಆಗ್ರಹ

Date:

ಶಿವಮೊಗ್ಗದ ವಿದ್ಯಾನಗರ ವಾರ್ಡ್ ನಂ.34ರಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಸ್ಮಾರ್ಟ್‌ಸಿಟಿ ಅನುದಾನ ಸಮರ್ಪಕವಾಗಿ ಬಳಕೆಯಾಗಿ ಕೂಡಲೇ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ನಿಸ್ವಾರ್ಥ ಜನಶಕ್ತಿ ವೇದಿಕೆಯ ಸಂಸ್ಥಾಪಕ ಹಾಗೂ ರಾಜಧ್ಯಕ್ಷ ಎಂ. ಸಮೀವುಲ್ಲಾ ಅವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ವಾರ್ಡ್ ನಂ. 34ರಲ್ಲಿನ ವಾದಿ-ಇ-ಹುದಾ, ಮಹಬೂಬ್ ನಗರ, ಮದಾರಿಪಾಳ್ಯ ಸೇರಿದಂತೆ ಹಲವು ಬಡಾವಣೆಗಳಲ್ಲಿ ಕಳೆದ 5೦ ವರ್ಷಗಳಿಂದ ಯಾವುದೇ ಸಮಸ್ಯೆಗಳು ಬಗೆಹರಿದಿಲ್ಲ. ಇಲ್ಲಿನ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸ್ಮಾರ್ಟ್‌ಸಿಟಿ ಯೋಜನೆಯು ಕಾರ್ಯಗತವಾಗಿಲ್ಲ. ಈ ವಾರ್ಡ್ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಮನವಿದಾರರು ತಿಳಿಸಿದರು.

ಎಲ್ಲಾ ಕೇರಿಗಳಲ್ಲಿ ಬೀದಿ ದೀಪಗಳ ಹಾಕಿಸಬೇಕು. ಶಾಸಕರ ಅನುದಾನದಲ್ಲಿ ಸೋಲಾರ್‌ಲೈಟ್ ಕಂಬ ಅಳವಡಿಸಬೇಕು. ಯುಜಿಡಿ ಕಾಮಗಾರಿ ಕೂಡಲೇ ಆರಂಭಿಸಬೇಕು. ಚರಂಡಿಗಳಲ್ಲಿ ಕೆಟ್ಟವಾಸನೆ ತುಂಬಿದ್ದು ಸ್ವಚ್ಛಗೊಳಿಸಬೇಕು. ರಸ್ತೆಗಳನ್ನು ದುರಸ್ತಿಗೊಳಿಸಬೇಕು, ಹಂದಿ, ನಾಯಿಗಳ ನಿಯಂತ್ರಿಸಬೇಕು. ಕುಡಿಯುವ ನೀರಿನ ಪೂರೈಕೆಯಾಗಬೇಕು ಹೊಸ ಪೈಪ್‌ಲೈನ್ ಮೀಟರ್‌ಗಳನ್ನು ನಿವಾಸಿಗಳ ಗಮನಕ್ಕೆ ತಾರದೇ ಅಳವಡಿಸಲಾಗಿತ್ತು. ಈ ಬಗ್ಗೆ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಮನವಿದಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕರುಗಳ, ಸಂಸದರ ಅನುದಾನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಇದು ಹಳೆಯ ವಾರ್ಡ್ ಆಗಿರುವುದರಿಂದ ಹೆಚ್ಚಿನ ಆದ್ಯತೆ ನೀಡಬೇಕು, ಮಹಾನಗರ ಪಾಲಿಕೆಯನ್ನು ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ವಾರ್ಡ್‌ಗಳಲ್ಲಿ ಪರಿವರ್ತಿಸಿ ಶಿವಮೊಗ್ಗ ನಗರವನ್ನು ಹೆಚ್ಚಿನ ಅಭಿವೃದ್ಧಿಗೆ ಕೊಂಡೊಯ್ಯಬೇಕು, ಸ್ಮಾರ್ಟ್‌ಸಿಟಿ ಅನುದಾನದ ಕೊರತೆ ಈ ವಾರ್ಡಿಗಿದ್ದು, ಕೂಡಲೇ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ-ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಸೂಳೆಬೈಲ್ ಸರ್ಕಲ್‌ವರೆಗೆ ದಾರಿದೀಪಗಳು ಸಂಪೂರ್ಣವಾಗಿ ಹಾಳಾಗಿದ್ದು, ಸಾರ್ವಜನಿಕರು ಕತ್ತಲಿನಲ್ಲೇ ಓಡಾಡುವಂತೆ ಆಗಿದೆ. ಹಾಗಾಗಿ ಕಳ್ಳರಕಾಟ ಹೆಚ್ಚಾಗಿದೆ. ಕೂಡಲೇ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಮನವಿದಾರರು ಒತ್ತಾಯಿಸಿದರು.

ಮನವಿ ನೀಡುವ ಸಂದರ್ಭದಲ್ಲಿ ಪ್ರಮುಖರಾದ ಮಹಮದ್ ಯೂಸಫ್, ಕೆ.ಬಿ. ಇಬ್ರಾಹಿಂ, ಸೂಫಿಮಲಾನ, ಮಹಮದ್ ಅನೀಫ್, ಮಹಮದ್ ಗೌಸ್‌ಖಾನ್, ವಾಹಬ್‌ಸಾಬ್, ಸಫೀಬೇಗ್, ಅಬ್ದುಲ್‌ರಹೀಂ, ಜಫ್ರುಲ್ಲಾಖಾನ್, ರಫೀಕ್ ಅಹ್ಮದ್, ಇಸ್ರಾದ್ ಅಹ್ಮದ್, ಅಸ್ಲಂಪಾಷಾ, ಸಾಹಿದ್‌ವಾಹಿದ್, ಸೋಹಲ್‌ಖಾನ್, ನಸ್ರುಲ್ಲಾ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...