ಶಿವಮೊಗ್ಗ | ಮಳೆ ಸಮಸ್ಯೆಯ ವರದಿ ಅಣ್ಣ-ತಮ್ಮಂದಿರ ಮನಸ್ತಾಪ: ತುಪ್ಪೂರು ಗ್ರಾಮ ಪಂಚಾಯತ್ ಪಿಡಿಒ

Date:

ವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೊರಗಿ ಎಂಬ ಗ್ರಾಮದಲ್ಲಿ ಮಳೆ ಅವಾಂತರದ ಬಗ್ಗೆ ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಈದಿನ ಡಾಟ್ ಕಾಮ್ ‘ಶಿವಮೊಗ್ಗ | ತುಪ್ಪೂರಿನ ಕೊರಗಿಯಲ್ಲಿ ಮಳೆ ಅವಾಂತರ: ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ’ ಎಂದು ಜೂನ್ 12ರಂದು ವರದಿ ಮಾಡಿತ್ತು. ಆ ಬಳಿಕ ಸ್ಥಳಕ್ಕೆ ಭೇಟಿ ನೀಡಿರುವ ತುಪ್ಪೂರು ಗ್ರಾಮ ಪಂಚಾಯತ್‌ನ ಅಧಿಕಾರಿಗಳು, ಜನಪ್ರತಿನಿಧಿಗಳು, “ಈ ಸಮಸ್ಯೆಯು ಅಣ್ಣ-ತಮ್ಮಂದಿರ ವೈಯಕ್ತಿಕ ಮನಸ್ತಾಪ. ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪತ್ರದ ಮೂಲಕ ಮಾಹಿತಿ ನೀಡಿರುವ ಗ್ರಾಮ ಪಂಚಾಯತ್ ಪಿಡಿಒ ಜಯಶ್ರೀ, “ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲೂಕು ಕುಂಸಿ ಹೋಬಳಿ ತುಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಗಿ ಗ್ರಾಮದಲ್ಲಿ ಮಳೆಯ ಅವಾಂತರ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಎಂದು ಸೋಷಿಯಲ್ ಮೀಡಿಯದಲ್ಲಿ ಈ ದಿನ ಮಾಧ್ಯಮವು ವರದಿ ಮಾಡಿತ್ತು. ಈ ಕುರಿತು ಕೊರಗಿ ಗ್ರಾಮಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತುಪ್ಪೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸ್ಥಳ ಪರಿಶೀಲನೆ ಮಾಡಿದ್ದೇವೆ. ಈ ವಿಚಾರವು ಸಂಪೂರ್ಣವಾಗಿ ಅಣ್ಣ-ತಮ್ಮಂದಿರ ವೈಯಕ್ತಿಕ ಮನಸ್ತಾಪದ ಜಗಳ” ಎಂದು ತಿಳಿಸಿದ್ದಾರೆ.

WhatsApp Image 2025 06 13 at 8.44.01 PM 1

“ಅಣ್ಣ-ತಮ್ಮಂದಿರ ವೈಯಕ್ತಿಕ ಮನಸ್ತಾಪದ ಜಗಳವನ್ನು ಗ್ರಾಮ ಪಂಚಾಯಿತಿಗೆ ವಿಷಯ ತಿಳಿಸಿಲ್ಲ. ಅಲ್ಲದೇ, ಇದನ್ನು ನೇರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದಾರೆ. ಈ ವಿಷಯ ತಿಳಿದ ತಕ್ಷಣ ಸ್ಥಳ ಪರಿಶೀಲಿಸಿ ವಿಜಯ ಇವರ ಜಮೀನಿನಲ್ಲಿ ಇರುವ ಕಾಲುವೆಯಲ್ಲಿ ಕಸ ಕಟ್ಟಿಕೊಂಡಿದ್ದು. ಆ ಕಸವನ್ನು ತೆಗೆಸಿ ನೀರು ಸರಾಗವಾಗಿ ಹರಿಯುವಂತೆ ಕಾಲುವೆ ಸರಿಪಡಿಸಲಾಗಿದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ತಿಳಿಸಲಾಗಿದೆ. ಜಮೀನಲ್ಲಿರುವ ಕಾಲುವೆಗೆ ಪೈಪ್ ಹಾಕಿಕೊಳ್ಳುವಂತೆ ತಿಳಿಸಲಾಯಿತು” ಎಂದು ಪಿಡಿಒ ಜಯಶ್ರೀ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶಿವಮೊಗ್ಗ | ತುಪ್ಪೂರಿನ ಕೊರಗಿಯಲ್ಲಿ ಮಳೆ ಅವಾಂತರ: ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

“ಇನ್ನು ಮುಂದೆ ಏನಾದರೂ ಸಮಸ್ಯೆಗಳು ಸಂಭವಿಸಿದಲ್ಲಿ ನೇರವಾಗಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗೆ ತಿಳಿಸುವಂತೆಯೂ, ತಿಳಿಸಿದಲ್ಲಿ ಸಮಸ್ಯೆ ಪರಿಹರಿಸಲು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯು ಯಾವ ಸಮಯದಲ್ಲಾದರು ಸಾರ್ವಜನಿಕರ ಜೊತೆ ನಿಲ್ಲುವುದಾಗಿ ಅಲ್ಲಿನ ಜನರಿಗೆ ತಿಳಿಸಲಾಯಿತು” ಎಂದು ತುಪ್ಪೂರು ಗ್ರಾಮ ಪಂಚಾಯತ್ ಪಿಡಿಒ ಜಯಶ್ರೀ ಅವರು ಶಿವಮೊಗ್ಗ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2025 06 13 at 8.44.01 PM
WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...