ಶಿವಮೊಗ್ಗ | ಲೋಕ್‌ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣ ಇತ್ಯರ್ಥಪಡಿಸಲು ಸಹಕರಿಸಲು ಮನವಿ : ನ್ಯಾ.ಮಂಜುನಾಥ್ ನಾಯ್ಕ್

Date:

ಶಿವಮೊಗ್ಗ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಲೋಕ್ ಅದಾಲತ್ ಕಾರ್ಯಕ್ರಮ ಜು..12 ರಂದು ಜಿಲ್ಲೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ್ ಅದಾಲತ್ ಯಶಸ್ವಿಯಾಗಲು ಎಲ್ಲರೂ ಸಹಕರಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಮನವಿ ಮಾಡಿದರು.

ಲೋಕ್ ಅದಾಲತ್ ಕುರಿತು ಚರ್ಚಿಸಲು ಗುರುವಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನ್ಯಾಯಾಧೀಶರು, ಅಧಿಕಾರಿಗಳು, ಅಭಿಯೋಜಕರು, ಇನ್ಶೂರೆನ್ಸ್ ಕಂಪೆನಿಗಳ ಅಧಿಕಾರಿಗಳೊಂದಿಗೆ ನಡೆಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಲೋಕ್ ಅದಾಲತ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು ಸೇರಿದಂತೆ ರಾಜೀಯಾಗಬಹುದಾದ ಸಿವಿಲ್, ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಬ್ಯಾಂಕುಗಳಿಗೆ ಸಂಭ ಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು. ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು.

ಈ ಬಾರಿ ‘ಸಾಥಿ’ ಅಭಿಯಾನದಡಿ ಪರಿತ್ಯಕ್ತ, ಪೋಷಕರಿಲ್ಲದ ಮಕ್ಕಳಿಗೆ ಆಧಾರ್ ಮಾಡಿಸಲಾಗುತ್ತಿದ್ದು, ಅದಕ್ಕೆ ಅಗತ್ಯವಾದ ಜನನ ಪ್ರಮಾಣ ಪತ್ರವನ್ನು ಪಾಲಿಕೆಯವರು ಮಾಡಿಕೊಡಬೇಕೆಂದರು. ಹಾಗೂ ಇನ್ಶೂರೆನ್ಸ್ ಕಂಪೆನಿಗಳು, ವಿವಿಧ ಇಲಾಖೆಗಳು ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಹಕರಿಸಬೇಕೆಂದರು. ದಿನಾಂಕ 14-12-2024 ರಂದು ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 13,393 ಪ್ರಕರಣಗಳು ವಿಲೇವಾರಿ ಆಗಿವೆ. ದಿನಾಂಕ 08-03-2025 ರಂದು ನಡೆದ ಲೋಕ್ ಅದಾಲತ್ ನಲ್ಲಿ 13,808 ವಿಲೇವಾರಿ ಆಗಿದ್ದು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನಾಂಕ: 12-07-2025 ರಂದು ನಡೆಯಲಿರುವ ಲೋಕ್ ಅದಾಲತ್‌ಗೆ ಈಗಾಗಲೇ 14,014 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು ಕಳೆದ ಬಾರಿ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಒಂದನೇ ಮತ್ತು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ, ಸರ್ಕಾರಿ ಅಭಿಯೋಜಕರು, ಇನ್ಶೂರೆನ್ಸ್ ಕಂಪೆನಿ ಅಧಿಕಾರಿಗಳು, ಅಬಕಾರಿ, ಅರಣ್ಯ, ಮೆಸ್ಕಾಂ, ಬ್ಯಾಂಕುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...