ಶಿವಮೊಗ್ಗ | ಆಯತಪ್ಪಿ ಬೈಕ್‌ನಿಂದ ಬಿದ್ದು ಸವಾರ ಸಾವು

Date:

ಶಿವಮೊಗ್ಗ ನಗರದ ಶಂಕರ ಮಠ ವೃತ್ತದ ಬಳಿ ಬೈಕ್ ಆಯತಪ್ಪಿ(ಸ್ಕಿಡ್)‌ ಬೈಕ್‌ನಿಂದ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಅಭಿಷೇಕ್(23) ಮೃತ ದುರ್ದೈವಿ. ನವುಲೆ ಬಳಿ ಮಾರುತಿ ಬಡಾವಣೆಯ ಮೊದಲ ತಿರುವಿನ ವಾಸಿ ಅಭಿಷೇಕ್ ಬಡಗಿ(ಕಾರ್ಪೆಂಟರ್) ಕೆಲಸ ಮಾಡಿಕೊಂಡಿದ್ದರು.

ಕೆಲಸ ಮುಗಿಸಿ ಬರುವಾಗ ಮಳೆ ಮುನ್ಸೂಚನೆ ಇದ್ದ ಕಾರಣ ಮನೆಗೆ ಬೇಗ ತಲುಪುವ ಧಾವಂತದಲ್ಲಿದ್ದ ಅಭಿಷೇಕ್, ಶಂಕರ ಮಠ ವೃತ್ತದಲ್ಲಿ ಬರುವಾಗ ಬೈಕ್ ಆಯತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದರು. ಬಳಿಕ ಅಲ್ಲೇ ಇದ್ದ ಸ್ಥಳೀಯರು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಾಕಾರಿಯಾಗದೆ ಅಭಿಷೇಕ್ ಮೃತಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...