ಶಿವಮೊಗ್ಗ | ಗಬ್ಬೆದ್ದು ನಾರುತ್ತಿದೆ ಸ್ಮಾರ್ಟ್ ಸಿಟಿ; ಕಣ್ಣು, ಮೂಗು ಮುಚ್ಚಿ ಕುಳಿತರೇ ಅಧಿಕಾರಿಗಳು?

Date:

ಸ್ಮಾರ್ಟ್ ಸಿಟಿಯ ಮುಖ್ಯ ಗುರಿಯೆಂದರೆ ನಗರ ಕಾರ್ಯಗಳನ್ನು ಅತ್ಯುತ್ತಮವಾಗಿಸುವುದು ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು. ಸ್ಮಾರ್ಟ್ ತಂತ್ರಜ್ಞಾನಗಳು ಮತ್ತು ದತ್ತಾಂಶ ವಿಶ್ಲೇಷಣೆಯನ್ನು ಬಳಸಿಕೊಂಡು ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸುವುದು. ಸ್ಮಾರ್ಟ್‌ ಸಿಟಿ ಎಂದರೆ ಎಲ್ಲರ ಕಲ್ಪನೆಯಲ್ಲೊಂದು ಫ್ಯಾಂಟಸಿ ಲೋಕ ಸೃಷ್ಟಿಯಾಗುತ್ತದೆ. ಬಹುಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಭಾರೀ ನಿರೀಕ್ಷೆ ಹುಟ್ಟಿಸಿಕೊಂಡು ಅನುಷ್ಠಾನಗೊಂಡ ಶಿವಮೊಗ್ಗ ಸ್ಮಾರ್ಟ್‌ ಸಿಟಿ ಲಿಮಿಟೆಡ್‌, ನಗರವನ್ನು ಕೊಳಚೆಗಿಂತಲೂ ಕಡೆಯಾಗಿ ಮಾಡಿದೆ.

ನಗರದ ಮಧ್ಯ ಭಾಗದಲ್ಲೇ ಒಳಚರಂಡಿಗಳು ತುಂಬಿ ರಸ್ತೆ ಮೇಲೆ ಹರಿಯುತ್ತಿವೆ. ನಗರದ ಎಲ್ಲಾ ತ್ಯಾಜ್ಯ ಒಟ್ಟಾಗಿ ಸೇರಿ ರಾಜ ರಸ್ತೆಗೆ ಬಂದು ನಗರವಾಸಿಗಳಿಗೆ ಸಾಕಪ್ಪಾ ಸಾಕು ಅನ್ನುವಷ್ಟು ದರ್ಶನ ಭಾಗ್ಯ ಕೊಡುತ್ತಿವೆ.

ಶಿವಮೊಗ್ಗ ನಗರ ಮಧ್ಯೆ ಇರುವ ಪ್ರತಿಷ್ಠಿತ ಬಡಾವಣೆಗಳಾದ ರವೀಂದ್ರ ನಗರ-ರಾಜೇಂದ್ರ ನಗರದ ಮಧ್ಯೆ ಹರಿದು ಹೋಗುತ್ತಿರುವ ಚಾನೆಲ್ ನ ಅಮೋಘ ದೃಶ್ಯಗಳಿವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001367043

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಇಲ್ಲಿ ಸುಂದರ ಪಾರ್ಕ್ ನಿರ್ಮಾಣವಾಗಿದ್ದರೂ ಜನಸಾಮಾನ್ಯರು ಇಲ್ಲಿನ ಪಾರ್ಕ್ ನಲ್ಲಿ ಓಡಾಡಲು ಸಾಧ್ಯವೇ ಇಲ್ಲ. ಅಷ್ಟು ದುರ್ನಾಥ ಬೀರುತ್ತಿದೆ ಚಾನೆಲ್ ನೀರು. ಸೊಳ್ಳೆ ಕಾಟದ ಜೊತೆಗೆ ನಾಗರಿಕರು ಇಲ್ಲಿಯ ಸುತ್ತ ಮುತ್ತ ವಾಸ ಮಾಡಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗಿದೆ.

1001367039

ಅತ್ತ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಇಲ್ಲದೆ, ಇತ್ತ ಸಂಬಂಧ ಪಟ್ಟ ಅಧಿಕಾರಿಗಳು ಗಮನಹರಿಸದಿರುವುದು ಈ ಬಡಾವಣೆಗಳ ಮಧ್ಯೆ ಹರಿದು ಹೋಗಿರುವ ಈ ಚಾನಲ್ ಸ್ಮಾರ್ಟ್‌ ಸಿಟಿ ಲಿ.ನ ಪರಮ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ.

ಇದರಿಂದ ಅನಾರೋಗ್ಯ ಹಾಗೂ ಸಾಂಕ್ರಾಮಿಕ ರೋಗಕ್ಕೆ ಆಹ್ವಾನ ನಿಶ್ಚಿತ ಎಂದು ಹೇಳಬಹುದು. ಬೇಸಿಗೆ ಆಗಿರುವ ಕಾರಣ ಪ್ರಾಣಿ ಪಕ್ಷಿಗಳು ನೀರು ಇಲ್ಲಿ ಬರುತ್ತವೆ. ಮನುಷ್ಯರು, ಪ್ರಾಣಿ, ಪಕ್ಷಿಳಾದಿಯಾಗಿ ಪರಿಸರದ ಮೇಲೂ ಇದರಿಂದ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ.

ಈ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆಯ ಎಇ ಸಿದ್ದಪ್ಪ ಈದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿ‌, “ಮುಂದಿನ ವಾರ ಅಥವಾ ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಮಾಡಲಾಗುತ್ತದೆ. ಟೆಂಡರ್ ಆದ ನಂತರ ಚಾನಲ್ ಸ್ವಚ್ಛಗೊಳಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ | ಹೊಸನಗರ ಮನೆಗಳ್ಳನ ಬಂಧನ

ಇನ್ನಾದರೂ ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತು ನಿವಾಸಿಗಳು ಅನುಭವಿಸುತ್ತಿರುವ ತೊಂದರೆಗೆ ಸ್ಪಂದಿಸುತ್ತಾರೆಯೇ? ಎಂದು ಪ್ರಶ್ನಿಸುತ್ತಿದ್ದಾರೆ ಶಿವಮೊಗ್ಗ ಪ್ರಜ್ಞಾವಂತ ಜನ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...