ಶಿವಮೊಗ್ಗ | ಅಜಾಗರೂಕ ಬಸ್ ಚಾಲನೆ; ಅಪಘಾತ ಓರ್ವ ಸಾವು, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್

Date:

ಶಿವಮೊಗ್ಗ ನಗರದಲ್ಲಿ ಬೆಳಿಗ್ಗೆ ಖಾಸಗಿ ಬಸ್‌ ಮತ್ತು ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಸುಮಾರು 10 ಜನರು ಗಾಯಗೊಂಡ ಘಟನೆ, ನಗರದ ಎಲ್‌ಎಲ್‌ಆರ್‌ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಬಸ್ ಮತ್ತು ಕಾರಿನ ನಡುವೆ ಇಂದು ಬೆಳಿಗ್ಗೆ 5-15 ರ ಸಮಯದಲ್ಲಿ ಸುಮಾರಿಗೆ ನಡೆದಿದೆ.ಕಾರಿನಲ್ಲಿದ್ದ ಬೆಂಗಳೂರು ಮೂಲದ ಪ್ರದೀಪ್‌ ಎಂಬುವವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ನಿವಾಸಿ ಪ್ರದೀಪ್ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಸೌಭಾಗ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಚಾಲಕನೊಂದಿಗೆ ಕಾರಿನಲ್ಲಿ ಆಗಮಿಸುತ್ತಿದ್ದರು.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರದೀಪ್ ಅವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಘಟನೆಯಲ್ಲಿ ಎರಡು ವಾಹನಗಳ ಚಾಲಕರು ಹಾಗೂ ಬಸ್ ನಲ್ಲಿದ್ದ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಮೆಗ್ಗಾನ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯಕ್ಕೆ ಮೆಗ್ಗಾನ್ ನಲ್ಲಿ ಇಬ್ಬರು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಆರು ಜನ ಸರ್ಜಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ವಿವೇಕ ಟ್ರಾವೆಲ್ಸ್ ಖಾಸಗಿ ಬಸ್, ತದನಂತರ ಸಾಗರಕ್ಕೆ ತೆರಳಬೇಕಾಗಿತ್ತು. ಎಲ್ಎಲ್ಆರ್ ರಸ್ತೆಯಲ್ಲಿ ಬಸ್ ತೆರಳುತ್ತಿದ್ದ ವೇಳೆ, ಖಾಸಗಿ ಬಸ್‌ ರಾಯಲ್‌ ಆರ್ಕಿಡ್‌ ಹೊಟೇಲ್‌ ಎದುರು ಬಿ.ಹೆಚ್‌.ರಸ್ತೆಯಿಂದ ಎಲ್‌ಎಲ್‌ಆರ್‌ ರಸ್ತೆಯಲ್ಲಿ ತೆರಳುತ್ತಿತ್ತು.

ಈ ಸಂದರ್ಭ ಗೋಪಿ ಸರ್ಕಲ್‌ ಕಡೆಯಿಂದ ಸವರ್‌ಲೈನ್‌ ರಸ್ತೆಯಲ್ಲಿ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.ಅಪಘಾತದ ಬಳಿಕ ಬಸ್ಸು ಪಕ್ಕದ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರು ಕೂಡ ಜಖಂ ಆಗಿದೆ.

ಕಿರಿದಾದ ರಸ್ತೆಯಲ್ಲಿ ಮಿತಿಮೀರಿದ ವೇಗ, ಅಜಾಗರೂಕ ಚಾಲನೆಯಿಂದ ಅವಘಡ ಸಂಭವಿಸಿದೆ.ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಘಟನಾ ಸ್ಥಳಕ್ಕೆ ಎಸ್ಪಿ ಜಿ ಕೆ ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಸಂಜೀವ್ ಪಾಟೀಲ್, ಟ್ರಾಫಿಕ್ ಸರ್ಕಲ್ ಇನ್ಸ್’ಪೆಕ್ಟರ್ ದೇವರಾಜ್, ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ಗಳಾದ ತಿರುಮಲೇಶ್, ಭಾರತಿ ಬಿ ಹೆಚ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...