ಶಿವಮೊಗ್ಗ | ರಾಗಿಗುಡ್ಡದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸಿ ; ಕ್ರಮ ಜರುಗಿಸಿ : ಕಿರಣ್ ಕರವೇ ಸ್ವಾಭಿಮಾನಿ ಬಣ

Date:

ಶಿವಮೊಗ್ಗ ಅಕ್ರಮ ಮಧ್ಯ ಮಾರಾಟದ ವಿರುದ್ಧ ಕರವೇ ಸ್ವಾಭಿಮಾನಿ ಬಣದಿಂದ ಅಬಕಾರಿ ಉಪ ಆಯುಕ್ತರು ರವರಿಗೆ ಮನವಿ ನೀಡಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಮಧ್ಯಮ ಬಡ ಕೂಲಿ ಕಾರ್ಮಿಕ ಅತಿ ಹೆಚ್ಚು ವಾಸವಿರುವ ಪ್ರದೇಶವಾಗಿದ್ದು ಇಲ್ಲಿ ಯಾವಾಗಲೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಪುಂಡರ ಹಾವಳಿ, ಕಳ್ಳತನ ಗಲಾಟೆ ಯಾವಾಗಲೂ ನಡೆಯುತ್ತಿರುತ್ತದೆ ಇದಕ್ಕೆ ಮೂಲ ಕಾರಣವೇ ಏನೆಂದರೆ ಈ ಪ್ರದೇಶದಲ್ಲಿ ಎಗ್ಗಿಲ್ಲದೆ ರಾಜಾ ರೋಷವಾಗಿ ದಿನದ 24 ಗಂಟೆಗಳ ಕಾಲ ಅಕ್ರಮವಾಗಿ ಮತ್ತು ಅನಧಿಕೃತವಾಗಿ ಮನೆ ಅಂಗಡಿಗಳಲ್ಲಿ ಮದ್ಯವನ್ನು ಮಾರಾಟ ಮಾಡುತ್ತಿರುತ್ತಾರೆ ಎಂದಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದ್ಯ ಕುಡಿದ ಪುಂಡರು ಅನಾವಶ್ಯಕವಾಗಿ ಇಲ್ಲಿ ದೊಂಬಿ ಕಳ್ಳತನ ಸಹಜವಾಗಿರುತ್ತದೆ ಎಂದರು.

ಈ ಬಗ್ಗೆ ನಮ್ಮ ಸಂಘಟನೆ ಹಿಂದೆ ಅಕ್ರಮವಾಗಿ ಮಧ್ಯವನ್ನು ಮಾರಾಟ ಮಾಡುವವರ ವಿರುದ್ಧ ಸಂಬಂಧಪಟ್ಟ ಇಲಾಖೆಗೆ ದೂರನ್ನು ನೀಡಿದ್ದರು ಸಹ ಯಾವ ಅಧಿಕಾರಿಗಳು ಅಥವಾ ಅಬಕಾರಿ ಇಲಾಖೆಯ ಅಧಿಕಾರಿಗಳು ಅನಧಿಕೃತ ಮಾರಾಟಗಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿದ್ದಾರೆ.

ಈ ಮಾರಾಟಗಾರರ ಜೊತೆಗೆ ಅಧಿಕಾರಿಗಳು ಶಾಮಿಲಾಗಿದ್ದಾರ ಎಂಬ ಅನುಮಾನವೂ ಮೂಡುತ್ತದೆ.

ರಾಗಿಗುಡ್ಡದಲ್ಲಿ ಆಗಿರುವ ಕೆಲ ಅನಾಹುತಗಳಿಗೆ ಈ ಅಕ್ರಮ ಮಧ್ಯದ ಮಾರಾಟವೇ ಕಾರಣ ಈಗಲಾದರೂ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ಈ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಿ ಈ ಅಕ್ರಮ ಮಾರಾಟವನ್ನು ನಿಲ್ಲಿಸಿ ಹಾಗೂ ಎಲ್ಲಿ ಗೂಡಂಗಡಿ ಮನೆಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೋ ಅಂತವರನ್ನು ಪತ್ತೆ ಹಚ್ಚಿ ಅಬಕಾರಿ ಇಲಾಖೆಯವರು ಕೂಡಲೇ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಸಂಘಟನೆ ಅಗ್ರಹಿಸುತ್ತದೆ ಎಂದಿದ್ದಾರೆ.

ಇಲ್ಲದಿದ್ದಲ್ಲಿ ಈ ಬಗ್ಗೆ ಸಂಘಟನೆ ವಿಭಿನ್ನ ರೀತಿಯ ಪ್ರತಿಭಟನೆಯನ್ನು ಕೇವಲ 15 ದಿನದ ಒಳಗಾಗಿ ಹಮ್ಮಿಕೊಳ್ಳುವುದು ಎಚ್ಚರಿಸುತ್ತದೆ ಎಂದಿರುತ್ತಾರೆ.

ಈ ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಸಿ ನಗರ ಅಧ್ಯಕ್ಷರಾದ ಜೀವನ ಡಿ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಲತೇಶ್. ಸತೀಶ್ ಸಂಘಟನೆ ಮುಖಂಡರಾದ ಸಾಧಿಕ್ ಸತೀಶ್ ಸಾಧಿಕ್ ಪುರ್ಲೆ ಆರತಿ ಕನ್ನಡಪರ ಹೋರಾಟಗಾರರಾದ ಸಂತೋಷ್ ದೇವೇಂದ್ರಪ್ಪ ರಾಮು ಜಾದವ್ ಮಹಮ್ಮದ್ ಆಲಿ ರವಿಕುಮಾರ್ ಶಿವಕುಮಾರ್ ಸುರೇಶ್ ಪರಮೇಶ್ ರಾಮು ರಾಗಿಗುಡ್ಡ ಮುಂತಾದ ಪದಾಧಿಕಾರಿಗಳು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...