ಶಿವಮೊಗ್ಗ | ಬಾಲಕನ ಮೇಲೆ ಬೀದಿ ನಾಯಿ ದಾಳಿ

Date:

ಶಿವಮೊಗ್ಗ, ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಇಂದು ನಡೆದಿದೆ.

ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ, 4 ವರ್ಷ ವಯೋಮಾನದ ಮಹಮ್ಮದ್ ತಮೀಮ್ ಗಾಯಗೊಂಡ ಬಾಲಕ ಎಂದು ಗುರುತಿಸಲಾಗಿದೆ.

ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ ನಿವಾಸಿಗಳು ನಾಯಿಯನ್ನು ಓಡಿಸಿ, ಬಾಲಕನ ರಕ್ಷಣೆ ಮಾಡಿದ್ದಾರೆ.

ಸೋಮಿಕೊಪ್ಪ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. ಜಾನುವಾರುಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ. ಇದೀಗ ಬಾಲಕನೋರ್ವನ ಮೇಲೆ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದೆ. ತಕ್ಷಣವೇ ಪಾಲಿಕೆ ಆಡಳಿತ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು’ ಎಂದು ಸೋಮಿನಕೊಪ್ಪದ ನಿವಾಸಿ ಮಕ್ಬುಲ್ ಅಹ್ಮದ್ ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...