ಶಿವಮೊಗ್ಗ | “ಸು ಫ್ರಮ್ ಸೋ” ಸಿನಿಮಾ ; “ಮಿಸು ಫ್ರಮ್ ಶಿ” : ಶಂಕರ್ ಎಲ್ ಆರ್ ಹೀಗೆ ಯಾಕೆ ಹೇಳಿದ್ದು ?

Date:

ಶಿವಮೊಗ್ಗ, ನಾಲ್ಕೈದು ದಿನಗಳಿಂದ ಬಹಳಷ್ಟು ಜನರ ಬಾಯಲ್ಲಿ ಒಂದೇ ಮಂತ್ರ ಅದುವೇ “ಸು ಫ್ರಮ್ ಸೋ’ ಅಂದಹಾಗೆ ಇದು ಮಂತ್ರವಲ್ಲ, ಇತ್ತೀಚೆಗಷ್ಟೇ ಬಿಡುಗಡೆಯಾಗಿ ಬಹಳಷ್ಟು ಜನರ ಮೆಚ್ಚುಗೆಗೆ ಪಾತ್ರವಾಗಿರುವ ಜೆ ಪಿ ತುಮಿನಾಡ ನಿರ್ದೇಶನದ ಸುಲೋಚನಾ ಫ್ರಮ್ ಸೋಮೇಶ್ವರ ಎಂಬ ಚಿತ್ರ.

ಈ ಚಿತ್ರವು ಪ್ರೇಕ್ಷಕರನ್ನು ಚಿತ್ರಮಂದಿರದಲ್ಲಿರುವಷ್ಟು ಸಮಯ ನಗೆಗಡಲಲ್ಲಿ ತೇಲಿಸಿದರೂ ಚಿತ್ರಮಂದಿರದಾಚೆ ಬರುವಾಗ ನಮ್ಮ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟುವ ಮಹತ್ತರವಾದ ಜವಾಬ್ದಾರಿಯನ್ನು ಪ್ರತಿಯೊಂದು “ಆತ್ಮ ”ಕ್ಕೂ ಹೊತ್ತು ಕಳುಹಿಸುತ್ತದೆ.

ಈ ಚಿತ್ರದಲ್ಲಿ ಸುಲೋಚನರವರ ಮಗಳು ಒಬ್ಬ ಅನಾಥ ಹೆಣ್ಣು ಮಗಳಾಗಿರುವ ಕಾರಣದಿಂದ ಆಕೆ ಅನುಭವಿಸುವ ಲೈಂಗಿಕ ದೌರ್ಜನ್ಯವನ್ನು ಬಹಳ ಸೂಕ್ಷ್ಮವಾಗಿ ಚಿತ್ರಿಸುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ ಹಾಗೂ” ನನ್ನ ತಾಯಿ ಇದ್ದಿದ್ದರೆ ಹೀಗೆ ಆಗೋಕೆ ಬಿಡುತ್ತಿರಲಿಲ್ಲ” ಎನ್ನುವ ಆಕೆಯ ಧ್ವನಿಯು ಪದೇ ಪದೇ ಚಿತ್ರಮಂದಿರದಾಚೆಗೂ ಗುನುಗುಟ್ಟದೇ ಇರದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವಿಷಯದ ಹಂದರವನ್ನೊಳಗೊಂಡ ಮತ್ತೊಂದು ಮಂತ್ರವೇ “ಮಿಸು ಫ್ರಮ್ ಶಿ “ಅಂದರೆ ಮಿಷನ್ ಸುರಕ್ಷಾ ಫ್ರಮ್ ಶಿವಮೊಗ್ಗ (MISSION SURAKSHA -Safe Urban And Rural Areas for Knowing and Shielding All children Rights )

ಇತ್ತೀಚಿಗೆ ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಮಾನ್ಯ ಜಿಲ್ಲಾಧಿಕಾರಿಗಳು ,ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳು ಹಾಗೂ ಪೊಲೀಸ್ ಅಧೀಕ್ಷಕರು ನಮ್ಮ ಜಿಲ್ಲೆಯಲ್ಲಿನ ಅನಾಥ ಹೆಣ್ಣು ಮಕ್ಕಳು, ಒಂಟಿ ಪೋಷಕರ ಹೆಣ್ಣು ಮಕ್ಕಳು ,ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸುವುದು, ಸೇರಿದಂತೆ ಹಲವು ವಿಷಯಗಳ ಮೇಲೆ ಹೆಚ್ಚು ಗಮನ ಹರಿಸಲು ನಗರದ ವಾರ್ಡ್ ಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಕಾವಲು ಸಮಿತಿಯನ್ನು ರಚಿಸಿ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಗಳನ್ನಾಗಿ ನೇಮಿಸಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ನಮ್ಮ ಜಿಲ್ಲೆಯಲ್ಲಿ ಗಣನೀಯವಾಗಿ ಕಡಿಮೆಗೊಳಿಸಲು ಟೊಂಕ ಕಟ್ಟಿ ನಿಲ್ಲುವ ಮಿಷನ್ ಸುರಕ್ಷಾ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಚಿತ್ರಮಂದಿರದಲ್ಲಿ ಹೆಣ್ಣಿನ ಸುರಕ್ಷತೆಯ ದೃಶ್ಯವನ್ನು ನೋಡಿ ಚಪ್ಪಾಳೆ ಹೊಡೆಯುವ ನಾವು ನಮ್ಮ ಹೆಣ್ಣು ಮಕ್ಕಳ ಸುರಕ್ಷತೆಯ ಭಾಗವಾಗಿ ಈ ತರಹದ ಪ್ರಕರಣಗಳನ್ನು ತಡೆಯಲು “1098” ಸಹಾಯವಾಣಿಗೆ ಕರೆ ಮಾಡುವುದರ ಮೂಲಕ ಅಥವಾ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರುವುದರ ಮೂಲಕ ಸುರಕ್ಷ ಅಭಿಯಾನಕ್ಕೆ ಕೈಜೋಡಿಸಿದರೆ ಬಾಹ್ಯ ಸಮಾಜದಲ್ಲಿಯೂ ನಮಗೆ ಚಪ್ಪಾಳೆ ಹೊಡೆಯುವುದು ಗ್ಯಾರಂಟಿಯಾಗಿದೆ.

ಈ ನಿಟ್ಟಿನಲ್ಲಿ ಸುರಕ್ಷಾ ಅಭಿಯಾನದ ಭಾಗವಾಗುವುದರೊಂದಿಗೆ ಚಿತ್ರದ ಅಂತ್ಯದಲ್ಲಿ ಸುಲೋಚನರವರ ಮಗಳ ಮುಖದ ಮೇಲಿನ ನಗುವಿನಂತೆ ನಮ್ಮ ಸುತ್ತಮುತ್ತಲಿನ ಹೆಣ್ಣು ಮಕ್ಕಳ ಮುಖದ ಮೇಲೂ ನಗುವನ್ನು ಕಾಣೋಣ, ಅವರ ಗೌರವ ಕಾಪಾಡೋಣವೆಂದು ಶಿವಮೊಗ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶಂಕರ ಎಲ್ ಆರ್ ಅಭಿಪ್ರಾಯಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...