ಶಿವಮೊಗ್ಗ | ಅಂಬೇಡ್ಕರ್ ಚಿಂತನೆಗಳ ಮಂಥನ ಅತಿ ಅಗತ್ಯ : ಡಾ. ಶ್ರೀಕಂಠ ಕೂಡಿಗೆ

Date:

ಶಿವಮೊಗ್ಗ, ಮಾನವತವಾದಿ ಅಂಬೇಡ್ಕರ್ ಚಿಂತನೆಗಳನ್ನು ಸರಿಯಾದ ಕ್ರಮದಲ್ಲಿ ಅರ್ಥೈಸುವ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಮುಂದಾಗಬೇಕು ಎಂದು ಕುವೆಂಪು ವಿವಿ ಕನ್ನಡ ಭಾರತಿ ವಿಶ್ರಾಂತ ಪ್ರಾಧ್ಯಾಪಕ ಡಾ. ಶ್ರೀಕಂಠ ಕೂಡಿಗೆ ಅಭಿಪ್ರಾಯಪಟ್ಟರು.

ಕುವೆಂಪು ವಿವಿ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್ ಚಿಂತನೆಗಳು ಮತ್ತು ಯುವಜನತೆ ವಿಚಾರ ಸಂಕಿರಣದ ಸಮರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ ಸಂಘಟನೆ ಹೋರಾಟದ ಸೂತ್ರಗಳನ್ನು ನೀಡಿದ ಅಂಬೇಡ್ಕರ್ ಹೊಸ ಸಮಾಜವನ್ನು ಕಟ್ಟುವಲ್ಲಿ ಶ್ರಮಿಸಿದವರು. ಅವರ ಚಿಂತನೆಗಳನ್ನು ಇಂದಿನ ಯುವಜನತೆ ಅರ್ಥೈಸಿಕೊಂಡು ನಾಳಿನ ಸಮಾಜವನ್ನು ರೂಪಿಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳು ಪರೀಕ್ಷೆಗೆ ಮಾತ್ರ ಸೀಮಿತವಾಗದೆ ಚಿಂತಕರ ಬರಹಗಳನ್ನು ಓದುವುದರ ಮೂಲಕ ಹೊಸ ಅರಿವನ್ನು ಪಡೆಯಬೇಕು. ವೈಯಕ್ತಿಕ ಬದುಕಿನ ಆಚೆ ಸಮುದಾಯಿಕ ಬದುಕಿಗೆ ತಮ್ಮನ್ನು ಅರ್ಪಿಸಿಕೊಳ್ಳಬೇಕು. ಇದರಿಂದ ಸಮಾನತೆಯ ಸಮಾಜವನ್ನು ಕಟ್ಟಲು ಸಾಧ್ಯವಾಗುತ್ತದೆ. ಮೌಢ್ಯಾಚರಣೆಗೆ ಬದಲಾಗಿ ಪ್ರಗತಿಪರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ವಿಮರ್ಶಕರಾದ ಡಾ. ಕೆ. ಕೇಶವಶರ್ಮ, ಚಿಂತಕರಾದ ಬಿ.ಎಲ್. ರಾಜು, ಡಾ. ಕುಮಾರ ಚಲ್ಯ, ಡಾ. ಬಸವರಾಜ್ ನೆಲ್ಲಿಸರ, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್, ಪ್ರಾಂಶುಪಾಲರಾದ ಡಾ. ಎಸ್. ರಾಜೇಶ್ವರಿ, ಡಾ. ಎಸ್.ಎಂ. ಮುತ್ತಯ್ಯ, ಪ್ರಾಧ್ಯಾಪಕರಾದ ಡಾ. ಕೃಷ್ಣಮೂರ್ತಿ, ಡಾ. ರಂಗಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...