ಶಿವಮೊಗ್ಗ | ತೀರ್ಥಹಳ್ಳಿ ಗಾಂಜಾ ಪ್ರಕರಣ; ಐವರಿಗೆ 4 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.

2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ ತೀರ್ಪು ನೀಡಿದೆ. ಅಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲ ನಗರದಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಅಂದಿನ ಡಿವೈಎಸ್​ಪಿ ಶಾಂತವೀರ್ ನೇತೃತ್ವದ ತಂಡ ದಾಳಿ ನಡೆಸಿತ್ತು.

ಪಶ್ಚಿಮ ಬಂಗಾಳ ಮೂಲದ 1) ಅಲೋಕ್ ಮಂಡಲ್ (34), 2) ಶ್ರೀಬಾಷ್ ಸರ್ಕಾರ್ (20), 3) ಅಮ್ರಿತ್ ಮಂಡಲ್ (27), 4) ಸಂಕರ್ ಬ್ಯಾಪಾರಿ (28) ಮತ್ತು 5) ಹರಧನ್ ಮಂಡಲ್ (32) ಎಂಬುವರನ್ನು ಬಂಧಿಸಿದ್ದ ಪೊಲೀಸ್ ತಂಡ ಒಟ್ಟಾರೆ,. 1 ಕೆಜಿ 564 ಗ್ರಾಂ ತೂಕದಗಾಂಜಾ , ₹3550 ನಗದು ಮತ್ತು 5 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿತ್ತು. ಅಷ್ಟೆ ಅಲ್ಲದೆ, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii)(B), 27(b) NDPS ಕಾಯ್ದೆ ಅಡಿ ಕೇಸ್ ದಾಖಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣ ಸಂಬಂಧ ಆಗಿನ ತನಿಖಾಧಿಕಾರಿ, ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿ.ಐ. ಅಶ್ವತ್ ಗೌಡ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಬಳಿಕ ಕೋರ್ಟ್​ನಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸುರೇಶ್ ಕುಮಾರ್ ಎ.ಎಂ. ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...