ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟವರಿಗೆ ಸಿಗದ ನಿವೇಶನ ; ರೈತರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Date:

ಶಿವಮೊಗ್ಗ, ಸೋಗಾನೆಯಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದವರಿಗೆ ಪ್ರತಿಯಾಗಿ ನಿವೇಶನ ನೀಡಬೇಕು ಎಂದು ಆಗ್ರಹಿಸಿ, ಏರ್ಪೋಟ್ ಮುಂದೆ ಭೂಮಿ ಕಳೆದುಕೊಂಡ ರೈತರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

15 ವರ್ಷಗಳ‌ ಹಿಂದೆ ವಿಮಾನ‌ ನಿಲ್ದಾಣ ನಿರ್ಮಾಣಕ್ಕೆ ಮುಂದಾದಾಗ ಇಲ್ಲಿ ನೂರಾರು ರೈತರು ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದರು. ಈ ವೇಳೆ, ಸರ್ಕಾರವು ಬಗರ್ ಹುಕುಂ ಭೂಮಿ ಬಿಡಿಸಿಕೊಳ್ಳಲು ಮುಂದೆ ಬಂದಾಗ ರೈತರು ವಿರೋಧ ವ್ಯಕ್ತಪಡಿಸಿದ್ದರು. ಆಗ ಸರ್ಕಾರದಿಂದ ಪ್ರತಿ ಎಕರೆಗೆ ಎರಡು ಲಕ್ಷ ರೂ ಹಣ ಹಾಗೂ ಒಂದು ನಿವೇಶನ ನೀಡುವ ಭರವಸೆ ನೀಡಲಾಗಿತ್ತು.ಅದರಂತೆ ಹಣವನ್ನು ರೈತರಿಗೆ ನೀಡಲಾಗಿತ್ತು‌.

ಆದರೆ, ನಿವೇಶನ ನೀಡಿರಲಿಲ್ಲ, ಇದರಿಂದ ರೈತರು ವಿಮಾನ ನಿಲ್ದಾಣ ಉದ್ಘಾಟನೆಗೆ ವಿರೋಧ ವ್ಯಕ್ತಪಡಿಸಿದಾಗ ಅಂದಿನ ಜನಪ್ರತಿನಿಧಿಗಳು ರೈತರ ಮನವೊಲಿಸಿ ವಿಮಾನ ನಿಲ್ದಾಣದ ಉದ್ಘಾಟನೆ ಮಾಡಿದ್ದರು.ಆದರೆ, ಈ ಭಾಗದ ರೈತರು ನಿವೇಶನಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದಾಗ ಕೋರ್ಟ್ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ನಿವೇಶನದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ರೈತರನ್ನು ವಸತಿ ಸಚಿವರಿಗೆ ಭೇಟಿ ಮಾಡಿಸಿದಾಗ ಅವರು ಕೆಹೆಚ್​ಬಿಯಿಂದ ನಿವೇಶನ ನೀಡಬೇಕಾದರೆ ನಮಗೆ ಭೂಮಿ ನೀಡಿ, ಇಲ್ಲವೇ, 32 ಕೋಟಿ ರೂ ಹಣ ನೀಡಿ ಎಂದು ಹೇಳಿದ್ದರು. ಈಗ ರಾಜ್ಯ ಸರ್ಕಾರ ಹಣ ನೀಡಿದರೆ ರೈತರಿಗೆ ನಿವೇಶನ ಲಭ್ಯವಾಗುತ್ತದೆ. ಹೀಗಾಗಿ, ರೈತರು ತಮಗೆ ನಿವೇಶನ ನೀಡಬೇಕು ಎಂದು ವಿಮಾನ ನಿಲ್ದಾಣದ ಮುಂಭಾಗ ತಮ್ಮ ಟ್ರ್ಯಾಕ್ಟರ್​​ನೊಂದಿಗೆ ಹೋರಾಟ ಪ್ರಾರಂಭಿಸಿದ್ದಾರೆ.

ಅನಿರ್ದಿಷ್ಟಾವಧಿ ಪ್ರತಿಭಟನೆ ಕುರಿತು ಭೂಮಿ ಕಳೆದುಕೊಂಡ ರೈತ ಮಹಿಳೆ ಅಂಬಿಕಾ ಮಾತನಾಡಿ, ‘ಹಿಂದೆ ಭೂಮಿ ನೀಡುವಾಗ ರಾಜ್ಯ ಸರ್ಕಾರ ನಮಗೆ ನಿವೇಶನ ನೀಡುವುದಾಗಿ ಹೇಳಿತ್ತು. ಈಗ ಹೈಕೊರ್ಟ್ ಸಹ ನಿವೇಶನ ನೀಡಬೇಕು ಎಂದು ಹೇಳಿದೆ. ಆದರೆ, ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ನಮ್ಮ 6 ಎಕರೆ ಭೂಮಿ ಹಾಗೂ ಎರಡು ಮನೆಯನ್ನು ವಿಮಾನ ನಿಲ್ದಾಣಕ್ಕೆ ನೀಡಲಾಗಿದೆ‌.

ನಮಗೆ ಹಿಂದಿನ ಸರ್ಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ‌. ಹಿಂದೆಯೇ ಸಂಸದರು ನಮಗೆ ನಿವೇಶನ ಕೊಡಿಸುವುದಾಗಿ ಹೇಳಿದ್ದರು. ಆದರೆ, ಈಗ ಯಾರೂ ಸಹ ನಮ್ಮ ನಿವೇಶನದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಇದರಿಂದಾಗಿ ನಾವು ಇಂದಿನಿಂದ ನಮ್ಮ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದೇವೆ. ನ್ಯಾಯ‌ ಸಿಗುವವರೆಗೂ ನಮ್ಮ ಧರಣಿ ಮುಂದುವರೆಯುತ್ತದೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...