ಶಿವಮೊಗ್ಗ | ಭೀಕರ ಅಪಘಾತದಲ್ಲಿ ಮೂವರ ದುರ್ಮರಣ

Date:

ಶಿವಮೊಗ್ಗ ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಘಟನೆ ನಡೆದಿದೆ.

ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ ಎಂದು ಗೊತ್ತಾಗಿದೆ.

1002474350

ಘಟನೆಯಲ್ಲಿ ವಾಹನದಲ್ಲಿದ್ದ ಅಸಾದುಲ್ಲಾ ( 50), ಸಾದಿಕ್ ( 30), ಮತ್ತು ಫಿರೋಜ್ ( 22) ಮೃತಪಟ್ಟಿದ್ದಾರೆ. ಮೃತರ ಪೈಕಿ ಅಸಾದುಲ್ಲಾ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಮೂಲದವರಾಗಿದ್ದು, ಸಾದಿಕ್ ಮತ್ತು ಫಿರೋಜ್ ಉತ್ತರ ಪ್ರದೇಶದ ಕಾರ್ಮಿಕರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002474434

ಘಟನೆಯಲ್ಲಿ ಗೂಡ್ಸ್ ವಾಹನವು ಜಖಂಗೊಂಡಿದ್ದು, ಚಾಲಕ ಇಮ್ರಾನ್ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ. ಘಟನೆ ಬೆನ್ನಲ್ಲೆ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಮೂವರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...