ಶಿವಮೊಗ್ಗ | ಜನಸಾಮಾನ್ಯರ ನಿರ್ಲಿಪ್ತತೆಯಿಂದ ಮಹಾನ್ ವ್ಯಕ್ತಿಗಳ ದುರಂತ ಅಂತ್ಯ: ರಾಧಾ ಸುಂದರೇಶ್

Date:

ಸಮಾಜಕ್ಕೆ ಸತ್ಯ, ಧಮ೯, ಶಾಂತಿ, ಸಮಾನತೆ ಸಾರಿದ ಮಹಾನ್ ವ್ಯಕ್ತಿಗಳ ಅಂತ್ಯ ದುರಂತದಲ್ಲಿ ಕೊನೆಗೊಂಡಿದ್ದು ಇತಿಹಾಸದ ಕಟುಸತ್ಯ. ಇದಕ್ಕೆ ಮುಖ್ಯ ಕಾರಣ ಜನಸಾಮಾನ್ಯರು ಪ್ರಶ್ನಿಸುವುದನ್ನು ಮರೆತು ನಿರ್ಲಿಪ್ತ ಧೋರಣೆ ಅನುಸರಿಸುವುದೇ ಆಗಿದೆ ಎಂದು ಚಿಕ್ಕಮಗಳೂರಿನ ಸಾಮಾಜಿಕ ಹೋರಾಟಗಾತಿ೯ ರಾಧಾ ಬಿ.ಕೆ. ಸುಂದರೇಶ್ ಅಭಿಪ್ರಾಯಪಟ್ಟರು.

1001366824

“ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಮಹಿಳಾ ಜಾಗೃತಿ ವೇದಿಕೆ, ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಹಿಂದುಳಿದ ಜನ ಜಾಗೃತಿ ವೇದಿಕೆ ಮಹಿಳಾ ಘಟಕ ಸಂಯುಕ್ತವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಿನ್ನೆ (ಮಾ.17) ಹಮ್ಮಿಕೊಂಡಿದ್ದ ಮಹಿಳಾ ಚೈತನ್ಯ ಸಮಾವೇಶದಲ್ಲಿ ಮಾತನಾಡಿದ ಅವರು, “ವಿಶ್ವಕ್ಕೆ ಶಾಂತಿ ಬೋಧಿಸಿದ ಏಸುಕ್ರಿಸ್ತರನ್ನು ಶಿಲುಬೆಗೆ ಏರಿಸಲಾಯಿತು, ಜ್ಞಾನದ ಜ್ಯೋತಿ ಬಸವಣ್ಣರನ್ನು ನೀರಿಗೆ ತಳ್ಳಲಾಯಿತು, ಮಹಾತ್ಮ ಗಾಂಧೀಜಿಯನ್ನು ಗುಂಡಿಟ್ಟು ಕೊಲ್ಲಲಾಯಿತು.. ಇದು ಈ ಸಮಾಜ ಮಹಾನ್ ವ್ಯಕ್ತಿಗಳನ್ನು ನಡೆಸಿಕೊಂಡ ದುರಂತಗಳ ಚರಿತ್ರೆ. ಇದಕ್ಕೆಲ್ಲಾ ಕಾರಣ ಜನಸಾಮಾನ್ಯರು ಮುಖ್ಯವಾಗಿ ಮಹಿಳೆಯರು ಸಮಾಜದ ಆಗು-ಹೋಗುಗಳ ಕಡೆಗೆ ಗಮನಕೊಡದೆ ನಿಲಿ೯ಪ್ತರಾಗಿದ್ದದ್ದು” ಎಂದು ಅವರು ಜನಸಾಮಾನ್ಯರ ನಿಸ್ಸೀಮ ನಿಲಿ೯ಪತೆಯ ಇತಿಹಾಸ ತೆರೆದಿಟ್ಟರು.

1001366823

“ಯಾವುದೇ ಒಂದು ದೇಶದ ಪ್ರಧಾನಿ ಅಥವಾ ಮಂತ್ರಿ ಇಲ್ಲವೇ ಅಧಿಕಾರಿ ತಿಂಗಳುಗಟ್ಟಲೆ ಕೆಲಸ ಮಾಡದೆ ದೇಶಾಂತರ ಹೋದರೂ ನಡೆಯುತ್ತದೆ ಅದೇ ರೀತಿ ರೈತರು, ಕಾಮಿ೯ಕರು, ಸೈನಿಕರು ಬಹುಮುಖ್ಯವಾಗಿ ಮಹಿಳೆಯರು ಕೆಲಸ ಮಾಡದೆ ನಿಲಿ೯ಪ್ತರಾಗಿ ಉಳಿದರೆ ಅಭಿವೃದ್ಧಿ ಕಾಯ೯ಗಳು ಕುಂಠಿತವಾಗಿ ದೇಶ ವಿನಾಶದ ಕಡೆಗೆ ಸಾಗುತ್ತದೆ” ಎಂದು ಅವರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಶಿವಮೊಗ್ಗ | ಹೆಚ್ಚಿದ ಶುಂಠಿ ಲಾಬಿ; ಮಲೆನಾಡ ರೈತರು ಕಂಗಾಲು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿವಮೊಗ್ಗದ ಸಿ.ಡಿ.ಪಿ.ಒ. ಗಂಗಾಬಾಯಿ, “ಭಾರತೀಯ ಮಹಿಳೆಯರು ಇಂದು ಎಲ್ಲ ರಂಗಗಳಲ್ಲೂ ಧಾಪುಗಾಲಿಡುತ್ತಿದ್ದು ಸಮಾಜದ ಆಗು-ಹೋಗುಗಳಿಗೆ ತೀಕ್ಷ್ಣವಾಗಿ ಸ್ಪಂದಿಸುವ ಮನೋಭಾವ ರೂಢಿಸಿಕೊಳ್ಳುವುದು ಅತ್ಯಂತ ಅವಶ್ಯಕವೆಂದು” ಕರೆ ನೀಡಿದರು.

1001366810

ಸಮಾವೇಶದಲ್ಲಿ ತೀಥ೯ಹಳ್ಳಿಯ ಸಾಮಾಜಿಕ ಕಾರ್ಯಕರ್ತೆ ಲತಾ ಜೋಯಿಸ್, ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷೆ ವೀರಮ್ಮ, ಎಲ್.ಐ.ಸಿ. ಡೆವಲಪ್‌ಮೆಂಟ್ ಆಫೀಸರ್ ದೀಪಿಕಾ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ, ಮಹಿಳಾ ಜಾಗೃತಿ ವೇದಿಕೆ ಸಂಚಾಲಕಿ ರಾಜಮ್ಮ, ವೀಣಾನಾಗೇಶ್, ದೀಪಿಕಾ, ಸರೋಜ ಸೇರಿದಂತೆ ಹಲವಾರು ಮಹಿಳೆಯರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...